Breaking News

ನಾಳೆಯಿಂದ ‘ರಾಜ್ಯ ಸರ್ಕಾರಿ ನೌಕರ’ರ ವರ್ಗಾವಣೆ ಆರಂಭ:

Spread the love

ಬೆಂಗಳೂರು: ಶೇ.6ರಷ್ಟು ಮೀರದಂತೆ ರಾಜ್ಯದ ಸರ್ಕಾರಿ ನೌಕರರ ವರ್ಗಾವಣೆಗೆ ( Karnataka Government Employees ) ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇದರ ಜೊತೆ ಜೊತೆಗೆ ವರ್ಗಾವಣೆಯ ಹೊಣೆಗಾರಿಕೆಯನ್ನು ಆಯಾ ಇಲಾಖಾ ಸಚಿವರಿಗೆ ನೀಡಿ ಆದೇಶಿಸಿದೆ.

 

ಈ ಬಗ್ಗೆ ರಾಜ್ಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಸರ್ಕಾರಿ ನೌಕರರ ವರ್ಗಾವಣೆ ( Transfer of Government Employees ) ಕುರಿತಂತೆ ವಿಸ್ತೃತವಾದ ಮಾರ್ಗಸೂಚಿಗಳನ್ನು ನೀಡಲಾಗಿದೆ. ಈ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಷರತ್ತುಗಳಿಗೆ ಒಳಪಟ್ಟು ಮಾಡಬಹುದಾಗಿದೆ.

 

2022-23ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್ ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ, ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿಸಲಾಗಿದೆ ಎಂದು ತಿಳಿಸಿದ್ದಾರೆ.

 

ಶೇ.6ರಷ್ಟು ಗ್ರೂಪ್-ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ, ನೌಕರಿಗೆ ಅನ್ವಯವಾಗುವಂತೆ ದಿನಾಂಕ 01-05-2022ರಿಂದ ದಿನಾಂಕ 15-06-2022ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.


Spread the love

About Laxminews 24x7

Check Also

ಧಾರವಾಡದಕ್ಲಿ ಸಾರ್ವಜನಿಕ ಗಣೇಶನ ಮೂರ್ತಿಗಳ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ…. ವಿಘ್ನ ನಿವಾರಕ ಮೂರ್ತಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದ ಜೋಶಿ.

Spread the love ಧಾರವಾಡದಕ್ಲಿ ಸಾರ್ವಜನಿಕ ಗಣೇಶನ ಮೂರ್ತಿಗಳ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ…. ವಿಘ್ನ ನಿವಾರಕ ಮೂರ್ತಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ