ಚಿಕ್ಕೋಡಿ: ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಒಳ್ಳೆಯ ಸರ್ಕಾರ ನೀಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾಯದರ್ಶಿ ಬಿ.ಎಲ್.ಸಂತೋಷ್ ಯಾಕೆ ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದು ಆಹಾರ ಹಾಗೂ ಅರಣ್ಯ ಇಲಾಖೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬೊಮ್ಮಾಯಿ ಸರ್ಕಾರದಲ್ಲಿಯೇ ನಾವು ಮಂತ್ರಿಯಾಗಿದ್ದೇವೆ. ಒಳ್ಳೆಯ ಸರ್ಕಾರದ ಜೊತೆಗೆ ಬರುವ ದಿನಗಳಲ್ಲಿ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದು ತಿಳಿಸಿದರು.