ಚಿತ್ರದುರ್ಗ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‍ಗೆ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.
ಚಿತ್ರದುರ್ಗ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಶ್ವಥ್ ನಾರಾಯಣ್ ಸಿಎಂ ರೇಸ್‍ನಲ್ಲಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ಧರಾಮಯ್ಯ ಆಡಳಿತದಲ್ಲಿ ಹೇಳಿಕೊಳ್ಳುವ ಸಾಧನೆ ಮಾಡಿಲ್ಲ. ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರದ ವಿರುದ್ಧ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಸದ್ಯ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ರಾಜ್ಯದಲ್ಲಿ ಸಿಎಂ ಆಗಿ ಬೊಮ್ಮಾಯಿ ಇದ್ದಾರೆಂದು ಟಾಂಗ್ ನೀಡಿದ್ದಾರೆ.