ಮುಂಬೈ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರ ದೇಶಾದ್ಯಂತ ನಾಗಾಲೋಟ ಮುಂದುವರೆಸಿದೆ. ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಯಾದರೂ ಮೂರನೇ ವಾರವೂ ಕೆಜಿಎಫ್ ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿದೆ.
ಕೆಜಿಎಫ್ 2 ಚಿತ್ರ ಸಾವಿರ ಗಡಿದಾಡಿದ ಭಾರತೀಯ ಚಿತ್ರರಂಗದ ನಾಲ್ಕನೇ ಚಿತ್ರವಾಗಿದೆ.
ಇನ್ನು ಅಮೀರ್ ಖಾನ್ ಅಭಿನಯದ ದಂಗಲ್ ಚಿತ್ರ 2000 ಕೋಟಿ ಗಳಿಸಿ ಸಾರ್ವಕಾಲಿಕ ದಾಖಲೆ ಮಾಡಿದೆ. ಆದರೆ ಆ ಚಿತ್ರ ಹಿಂದಿಯಲ್ಲಿ 387 ಕೋಟಿ ರುಪಾಯಿ ಮಾತ್ರ ಗಳಿಕೆ ಮಾಡಿತ್ತು. ಇದು ಸದ್ಯದ ಮಟ್ಟಿಗೆ ಎರಡನೇ ಅಗ್ರ ಚಿತ್ರವಾಗಿದೆ. ಇದೀಗ 369 ಕೋಟಿ ಗಳಿಸಿರುವ ಕೆಜಿಎಫ್ ಚಿತ್ರ ಇದೇ ವಾರದಲ್ಲಿ ಈ ದಾಖಲೆಯನ್ನು ಉಡೀಸ್ ಮಾಡಬಹುದು.
ಭಾರತೀಯ ಚಿತ್ರರಂಗದಲ್ಲಿ ಹೊಸ ಹೊಸ ದಾಖಲೆಗಳನ್ನು ನಿರ್ಮಿಸುತ್ತಿರುವ ಕೆಜಿಎಫ್ 2 ಚಿತ್ರದ ಬಗ್ಗೆ ಅಮೀರ್ ಖಾನ್ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಹೌದು ಖಾಸಗಿ ಸುದ್ದಿವಾಹಿನಿಗೆ ಸಂದರ್ಶನ ನೀಡುವ ಸಂದರ್ಭದಲ್ಲಿ ಅಮೀರ್ ಖಾನ್ ಹೌದು ಕೆಜಿಎಫ್ ಚಿತ್ರದ ಅಬ್ಬರ ಕಂಡು ಹೆದರಿದ್ದೆ. ಕೆಜಿಎಫ್ ಕಥೆಯೇ ಹಾಗಿದೆ ಎಂದು ಹೇಳಿದ್ದಾರೆ.