Breaking News

ಕೆಜಿಎಫ್ ಚಿತ್ರದ ಅಬ್ಬರ ನೋಡಿ ಹೆದರಿದ್ದೆ: ಬಾಲಿವುಡ್ ನಟ ಅಮೀರ್ ಖಾನ್

Spread the love

ಮುಂಬೈ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರ ದೇಶಾದ್ಯಂತ ನಾಗಾಲೋಟ ಮುಂದುವರೆಸಿದೆ. ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಯಾದರೂ ಮೂರನೇ ವಾರವೂ ಕೆಜಿಎಫ್ ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿದೆ.

ಕೆಜಿಎಫ್ 2 ಚಿತ್ರ ಸಾವಿರ ಗಡಿದಾಡಿದ ಭಾರತೀಯ ಚಿತ್ರರಂಗದ ನಾಲ್ಕನೇ ಚಿತ್ರವಾಗಿದೆ.

ಇನ್ನು ಅಮೀರ್ ಖಾನ್ ಅಭಿನಯದ ದಂಗಲ್ ಚಿತ್ರ 2000 ಕೋಟಿ ಗಳಿಸಿ ಸಾರ್ವಕಾಲಿಕ ದಾಖಲೆ ಮಾಡಿದೆ. ಆದರೆ ಆ ಚಿತ್ರ ಹಿಂದಿಯಲ್ಲಿ 387 ಕೋಟಿ ರುಪಾಯಿ ಮಾತ್ರ ಗಳಿಕೆ ಮಾಡಿತ್ತು. ಇದು ಸದ್ಯದ ಮಟ್ಟಿಗೆ ಎರಡನೇ ಅಗ್ರ ಚಿತ್ರವಾಗಿದೆ. ಇದೀಗ 369 ಕೋಟಿ ಗಳಿಸಿರುವ ಕೆಜಿಎಫ್ ಚಿತ್ರ ಇದೇ ವಾರದಲ್ಲಿ ಈ ದಾಖಲೆಯನ್ನು ಉಡೀಸ್ ಮಾಡಬಹುದು.

ಭಾರತೀಯ ಚಿತ್ರರಂಗದಲ್ಲಿ ಹೊಸ ಹೊಸ ದಾಖಲೆಗಳನ್ನು ನಿರ್ಮಿಸುತ್ತಿರುವ ಕೆಜಿಎಫ್ 2 ಚಿತ್ರದ ಬಗ್ಗೆ ಅಮೀರ್ ಖಾನ್ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಹೌದು ಖಾಸಗಿ ಸುದ್ದಿವಾಹಿನಿಗೆ ಸಂದರ್ಶನ ನೀಡುವ ಸಂದರ್ಭದಲ್ಲಿ ಅಮೀರ್ ಖಾನ್ ಹೌದು ಕೆಜಿಎಫ್ ಚಿತ್ರದ ಅಬ್ಬರ ಕಂಡು ಹೆದರಿದ್ದೆ. ಕೆಜಿಎಫ್ ಕಥೆಯೇ ಹಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ