ಬೆಂಗಳೂರು : ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ ‘ಹಲೋ ಕಂದಾಯ ಸಚಿವರೇ’ ಎಂಬ ಸಹಾಯವಾಣಿ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಕಂದಾಯ ಸಚಿವ ಆರ್ ಅಶೋಕ್ ( Minister R Ashok ), ಬೆಂಗಳೂರಿನ ನಾಗರೀಕರಿಗೆ ವಿವಿಧ ಪಿಂಚಣಿ ಸೌಲಭ್ಯ ತಲುಪಿಸಲು ಇ-ಕಾಮರ್ಸ್ ಮೊರೆ ಹೋಗೋದಕ್ಕೆ ಚಿಂತನೆ ನಡೆಸಲಾಗಿದೆ.
ಬೆಂಗಳೂರಿನಲ್ಲಿ ಸ್ವಿಗ್ಗಿ, ಡಂಜೋ, ಜೊಮ್ಯಾಟೋ ಸಿಬ್ಬಂದಿ ಮೂಲಕ ಪಿಂಚಣಿ ಸೌಲಭ್ಯ ಮುಟ್ಟಿಸಲು ಪ್ಲಾನ್ ಮಾಡಲಾಗಿದೆ ಎಂದರು.ಮಧ್ಯವರ್ತಿಗಳ ಕಾಟವಿಲ್ಲದೆ, ಫಲಾನುಭವಿಗಳಿಗೆ ಅಲೆದಾಟ ಇಲ್ಲದೆ ಪಿಂಚಣಿ ಮಂಜೂರು ಮಾಡಲಾಗುವುದು. ಅರ್ಜಿ ಸಲ್ಲಿಸಿದ 72 ಗಂಟೆಗಳ ಒಳಗೆ ಅರ್ಹ ಫಲಾನುಭವಿಗಳಿಗೆ ಮನೆ ಬಾಗಿಲಿಗೆ ಪಿಂಚಣಿ ತಲುಪಿಸಲಾಗುವುದು. ಇದು ದೇಶದಲ್ಲೇ ಮಾದರಿ ಪ್ರಕ್ರಿಯೆಯಾಗಿದೆ ಎಂದು ಹೇಳಿದರು