Breaking News

ಬಿ.ಎಲ್. ಸಂತೋಷ್ ಹೇಳಿಕೆಗೆ ಟಾಂಗ್ ನೀಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

Spread the love

ಶಿವಮೊಗ್ಗ: ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ ಎಂದು ಹೇಳುವ ಮೂಲಕ ಪರೋಕ್ಷವಾಗಿ ನಾಯಕತ್ವ ಬದಲಾವಣೆ ಮಾತುಗಳನ್ನು ಆಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿಕೆಗೆ ಟಾಂಗ್ ನೀಡಿರುವ ಮಾಜಿ ಸಿಎಂ ಬಿ.ಎಸ್.

ಯಡಿಯೂರಪ್ಪ, ಯಾವುದೇ ನಾಯಕತ್ವದ ಬದಲಾವಣೆ ಪ್ರಶ್ನೆ ಇಲ್ಲ ಎಂದು ತಿಳಿಸಿದ್ದಾರೆ.

ಶಿವಮೊಗ್ಗದ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ನಾಯಕತ್ವ ಬದಲಾವಣೆಯ ಯಾವುದೇ ಚರ್ಚೆಯಿಲ್ಲ, ಅಂತಹ ವಿಚಾರವಿದ್ದರೆ ನನಗೆ ಗೊತ್ತಾಗುತ್ತಿತ್ತು. ಈಗಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಒಳ್ಳೆಯ ಕೆಲಸ, ಉತ್ತಮ ಆಡಳಿತ ನಡೆಸುತ್ತಿದ್ದಾರೆ ಎಂದರು.

ಬಿ.ಎಲ್. ಸಂತೋಷ್ ಅವರ ಹೇಳಿಕೆ ಬಗ್ಗೆ ನಾನು ಚರ್ಚೆ ನಡೆಸಲ್ಲ. ನಾಯಕತ್ವ ಬದಲಾವಣೆ ಕೇಂದ್ರದ ನಾಯಕರಿಗೆ ಬಿಟ್ಟದ್ದು. ಅಂತಹ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ