ಬೆಳಗಾವಿ: ಗಡಿವಿವಾದ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಬ್ಬರಿಸುತ್ತಿದ್ದ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಯುವ ಘಟಕದ ಅಧ್ಯಕ್ಷ ಶುಭಂ ಶೆಳಕೆ ಇದೀಗ ಸರ್ಕಾರಿ ಕಚೇರಿಯಲ್ಲೂ ಪುಂಡಾಟ ಪ್ರದರ್ಶಿಸಿರುವುದು ಬೆಳಕಿಗೆ ಬಂದಿದೆ. ಮೂರು ದಿನಗಳ ಹಿಂದೆ ನಡೆದ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಶಿಕ್ಷಣ ಇಲಾಖೆ ಸಿಆರ್‍ಪಿ ಕೌನ್ಸೆಲಿಂಗ್ ವೇಳೆ ಮರಾಠಿ ಶಾಲೆಗೆ ಕನ್ನಡಿಗ ಸಿಆರ್‍ಪಿ ನಿಯೋಜನೆ ಮಾಡಲಾಗಿದೆ. ಮರಾಠಿ ಶಿಕ್ಷಕರ ಮೇಲೆ ಕನ್ನಡ ಹೇರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬೆಳಗಾವಿ ಡಿಡಿಪಿಐ ಕಚೇರಿಗೆ ನುಗ್ಗಿ ಶುಭಂ ಪುಂಡಾಟಿಕೆ ಪ್ರದರ್ಶಿಸಿದ್ದಾನೆ. ಶೈಕ್ಷಣಿಕ ಕ್ಷೇತ್ರದಲ್ಲಿ ಭಾಷಾ ವೈಷಮ್ಯದ ವಿಷಬೀಜ ಬಿತ್ತಲು ಎಂಇಎಸ್ ಯತ್ನಿಸುತ್ತಿದೆ. ಕನ್ನಡ ಅಥವಾ ಇಂಗ್ಲಿಷ್‍ನಲ್ಲಿ ಅಧಿಕಾರಿ ಮನವಿ ಪತ್ರ ಕೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮರಾಠಿ ಶಿಕ್ಷಕರೆಲ್ಲರನ್ನೂ ಸೇರಿಸಿ ಪ್ರತಿಭಟನೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
Laxmi News 24×7