Breaking News

ಮೇ 10ರ ಒಳಗಡೆ ಸಿಎಂ ಬದಲಾವಣೆ ಆಗಲಿದ್ದಾರೆ:ಬಸನಗೌಡ ಪಾಟೀಲ್‌ ಯತ್ನಾಳ್‌

Spread the love

ಬೆಂಗಳೂರು: ಒಂದೊಂದು ರಾಜ್ಯದಲ್ಲಿ ಒಂದೊಂದು ಮಾದರಿಯನ್ನು ಜಾರಿ ಮಾಡುತ್ತಿರುವ ಬಿಜೆಪಿ ಹೈಕಮಾಂಡ್‌ ಚುನಾವಣೆ ಹತ್ತಿರ ಬರುತ್ತಿರುವ ಕರ್ನಾಟಕದಲ್ಲಿ ಯಾವ ಮಾದರಿಗೆ ಮಣೆ ಹಾಕುತ್ತದೆ? ಅಥವಾ ಕರ್ನಾಟಕದ್ದೇ ಮಾಡೆಲ್‌ ತರುತ್ತಾ ಎಂಬ ಕುತೂಹಲ ಎದ್ದಿದೆ.

ವಿಜಯಪುರದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಮೇ 10ರ ಒಳಗಡೆ ಸಿಎಂ ಬದಲಾವಣೆ ಆಗಲಿದ್ದಾರೆ ಎಂದು ಹೇಳಿದರೆ ಯಡಿಯೂರಪ್ಪ, ಅಶೋಕ್‌ ಸಿಎಂ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ

ನಾಯಕರು ಏನೇ ಹೇಳಿದರೂ ಬಿಜೆಪಿ ಹೈಕಮಾಂಡ್‌ ಭಿನ್ನವಾಗಿ ಯೋಚಿಸಿ ನಿರ್ಧಾರವನ್ನು ತೆಗೆದುಕೊಳ್ಳುವುದರಲ್ಲಿ ಹೆಸರುವಾಸಿ. ಅನುಭವವೇ ಇಲ್ಲದ ವ್ಯಕ್ತಿಗೆ ಲೋಕಸಭೆ ಟಿಕೆಟ್‌. ಒಂದು ಬಾರಿ ಆಯ್ಕೆಯಾದ ವ್ಯಕ್ತಿಗೆ ಸಿಎಂ ಪಟ್ಟ. ಹಿರಿಯರ ಬದಲು ಸಂಪುಟದಲ್ಲಿ ಯುವ ಮುಖಗಳಿಗೆ ಆದ್ಯತೆ. ಈ ಎಲ್ಲ ಪ್ರಯೋಗ ಮಾಡಿ ಯಶಸ್ವಿಯಾಗಿರುವ ಬಿಜೆಪಿ ಕರ್ನಾಟಕದಲ್ಲಿ ಏನು ಮಾಡುತ್ತದೆ ಎನ್ನುವುದು ಸದ್ಯದ ಕುತೂಹಲ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ