ಕ್ಯೂಆರ್ ಕೋಡ್ ಸ್ಕ್ಯಾನ್ ಮೂಲಕ ನೂತನ ಯೋಜನೆಗೆ ಚಾಲನೆ ನೀಡಿ, ಕರ್ನಾಟಕ ಸರ್ಕಾರದ ಮಹತ್ವದ ಪ್ರಯತ್ನವನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಜನರ ಮಾನ ಪ್ರಾಣ ರಕ್ಷಿಸುವುದು ಪೊಲೀಸ್ ಇಲಾಖೆಯ ಸವಾಲಿನ ಕೆಲಸ. ಅಪರಾಧಗಳ ತಡೆಗೆ ಸ್ಮಾರ್ಟ್ ಪೊಲೀಸ್ E BEAT ನೆರವು ಪಡೆದುಕೊಳ್ಳಬೇಕಿದೆ. ಅಪರಾಧ ಪ್ರಕರಣಗಳ ಶೀಘ್ರ ಪತ್ತೆಗೆ ವಿಧಿ ವಿಜ್ಞಾನ ಪ್ರಯೋಗಾಲಯದಿಂದ (FSL) ನೆರವು ಪಡೆದುಕೊಳ್ಳಬೇಕಿದೆ. ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ದಾವಣಗೆರೆ, ಬಳ್ಳಾರಿ ಸೇರಿದಂತೆ 7 ಕಡೆ ವಿಧಿವಿಜ್ಞಾನ ಪ್ರಯೋಗಾಲಯ ಸ್ಥಾಪನೆಯಾಗಿದೆ ಎಂದು ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಲೋಕಪ್ರಿಯ ಮುಖ್ಯಮಂತ್ರಿ ಎಂದು ಕರೆದರು. ಇದು ಸ್ವಾತಂತ್ರ್ಯದ ಅಮೃತ ಮಹೋತ್ಸವದ ವರ್ಷ. ಈ ವರ್ಷದಲ್ಲಿ ವಿಶ್ವವಿದ್ಯಾಲಯ ಉದ್ಘಾಟನೆ ಆಗಿರುವುದು ಸಂತಸದ ವಿಚಾರ. ದೇಶವನ್ನು ಸರ್ವೊತ್ತಮ ಸ್ಥಾನದಲ್ಲಿ ಇರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಸಂಕಲ್ಪ ಮಾಡಿದ್ದಾರೆ. ವೈದ್ಯಕೀಯ ಕಾಲೇಜು, ಕೇಂದ್ರೀಯ ವಿಶ್ವವಿದ್ಯಾಲಯ, ಐಐಟಿಗಳನ್ನು ಬಿಜೆಪಿ ನೇತೃತ್ವದ ಮೋದಿ ಸರ್ಕಾರ ದೇಶದಲ್ಲಿ ಹೊಸದಾಗಿ ಸ್ಥಾಪನೆ ಮಾಡಿದೆ.