Breaking News

ಅಮಿತ್ ಶಾ ಬೆಂಗಳೂರಿನಲ್ಲಿ ಇರುವಾಗಲೇ ಯತ್ನಾಳ್ ಹೊಸ ಬಾಂಬ್

Spread the love

ವಿಜಯಪುರ, ಮೇ 3: ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮಾತಿಗೆ ಬಿಜೆಪಿಯಲ್ಲಿ ಎಷ್ಟು ಬೆಲೆ ಇದೆಯೋ ತಿಳಿದಿಲ್ಲ. ಆದರೆ, ರಾಜಕಾರಣದ ಸುತ್ತಮುತ್ತ ವಿವಾದಕಾರೀ ಹೇಳಿಕೆಯನ್ನು ನೀಡುವುದರಲ್ಲಿ ಅವರು ನಿಸ್ಸೀಮರು.

ಸ್ವಪಕ್ಷೀಯದವರನ್ನೇ ಅದರಲ್ಲೂ ಪ್ರಮುಖವಾಗಿ ಯಡಿಯೂರಪ್ಪ, ವಿಜಯೇಂದ್ರ ಮತ್ತು ಮುರುಗೇಶ್ ನಿರಾಣಿ ವಿರುದ್ದ ಕಿಡಿಕಾರುವ ಯತ್ನಾಳ್, ಅಮಿತ್ ಶಾ ಅವರು ರಾಜ್ಯ ಪ್ರವಾಸದಲ್ಲಿ ಇದ್ದಾಗಲೇ ಮತ್ತೊಂದು ಹೇಳಿಕೆಯನ್ನು ನೀಡಿ, ಪಕ್ಷದ ನಾಯಕರಿಗೆ ಮುಜುಗರ ತಂದಿದ್ದಾರೆ.

“ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರಿನಲ್ಲಿ ಇದ್ದಾರೆ, ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಮೋದಿಯವರ ನೇತೃತ್ವದಲ್ಲಿ ರಾಜ್ಯಕ್ಕೆ ಸಂಬಂಧ ಪಟ್ಟಂತೆ ಹೈವೋಲ್ಟೇಜ್ ಸಭೆ ನಡೆದಿದೆ” ಎಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಯತ್ನಾಳ್ ಹೇಳಿದರು.

“ಮೇ 10ರ ಒಳಗಡೆ ಸಿಎಂ ಬಸವರಾಜ ಬೊಮ್ಮಾಯಿಯವರ ಬದಲಾವಣೆ ಆಗಬಹುದು, ಈ ಸಂಬಂಧ ಪ್ರಧಾನಿ ಮೋದಿಯವರು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಸದ್ಯ ಅವರು ವಿದೇಶ ಪ್ರವಾಸದಲ್ಲಿದ್ದಾರೆ” ಎಂದು ಯತ್ನಾಳ್ ಹೇಳುವ ಮೂಲಕ ಹೊಸ ಬಾಂಬ್ ಅನ್ನು ಸಿಡಿಸಿದ್ದಾರೆ.

“ಮುಖ್ಯಮಂತ್ರಿ ಬದಲಾವಣೆಯಾದರೆ ಒಬ್ಬರಿಗೆ ಜೈಲಿಗೆ ಹೋಗುತ್ತೇವೆ (ಡಿ.ಕೆ.ಶಿವಕುಮಾರ್) ಎನ್ನುವ ಭಯವಿದೆ. ಇನ್ನೊಬ್ಬರಿಗೆ ಮತ್ತೆ ಮುಖ್ಯಮಂತ್ರಿಯಾಗುವುದಿಲ್ಲ (ಸಿದ್ದರಾಮಯ್ಯ) ಎನ್ನುವ ಭೀತಿಯಿದೆ”ಎಂದು ಯತ್ನಾಳ್ ಅವರು ಕಾಂಗ್ರೆಸ್ ನಾಯಕರ ವಿರುದ್ದ ವ್ಯಂಗ್ಯವಾಡಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ