ಬೆಂಗಳೂರು: ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮಂಗಳವಾರ ಬೆಳಿಗ್ಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಜತೆ ಹೊರಟ್ಟಿ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.
ನಂತರ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿರುವ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಇದುವರೆಗೆ ಯಾರಿಗೂ ಟಿಕೆಟ್ ಘೋಷಿಸಿಲ್ಲ. ಹೊರಟ್ಟಿ ಸೇರ್ಪಡೆ ಬಳಿಕ ಘೋಷಣೆ ಮಾಡಲು ನಿರ್ಧರಿಸಲಾಗಿತ್ತು.
Laxmi News 24×7