Breaking News

ಮುಖ್ಯಮಂತ್ರಿ ಬೊಮ್ಮಾಯಿ ನಿವಾಸದಲ್ಲಿ ಹೋಳಿಗೆ ಊಟ ಸವಿದ ಅಮಿತ್ ಶಾ!

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಯೋಜಿಸಿದ್ದ ಭೋಜನಕೂಟದಲ್ಲಿ ಅಮಿತ್ ಶಾ ಭಾಗಿಯಾಗಿದ್ದು, ಇವರ ಜೊತೆಗೆರಾಜ್ಯ ಬಿಜೆಪಿ ನಾಯಕರು ಪಾಲ್ಗೊಂಡಿದ್ದು, ಬೆಳ್ಳಿ ತಟ್ಟೆಯಲ್ಲಿ ಭೋಜನ ಸೇವಿಸಿದರು.
ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್​​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏರ್ಪಡಿಸಿರುವ ಭೋಜ‌ನ ಕೂಟದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಒಂದೇ ಟೇಬಲ್‌ನಲ್ಲಿ ಕುಳಿತು ದುಂಡುಮೇಜಿನ ಭೋಜನ ಸೇವಿಸಿದರು.

ಬಸವ ಜಯಂತಿ ಪ್ರಯುಕ್ತ ವಿಶೇಷ ಹೋಳಿಗೆ ಊಟ ಏರ್ಪಾಡು ಮಾಡಲಾಗಿತ್ತು. ಸೌತ್ ಇಂಡಿಯನ್ ಜೊತೆ ನಾರ್ತ್ ಇಂಡಿಯನ್ ಊಟದ ವ್ಯವಸ್ಥೆ ಕೂಡ ಮಾಡಲಾಗಿತ್ತು.
ಸಿಎಂ ಬೊಮ್ಮಾಯಿ ಭೋಜನ ಕೂಟಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಜಿ ಎಂ ಸಿದ್ದೇಶ್, ಶ್ರೀರಾಮುಲು, ಶೋಭಾ ಕರಂದ್ಲಾಜೆ, ಗೋವಿಂದ್ ಕಾರಜೋಳ, ಸಂಸದ ಜಿ ಎಸ್ ಬಸವರಾಜ್, ಮಾಜಿ ಕೇಂದ್ರ ಸಚಿವ ಸದಾನಂದ ಗೌಡ, ಅಶ್ವತ್ಥ್ ನಾರಾಯಣ, ರಾಜ್ ಕುಮಾರ್ ಪಾಟೀಲ್ ತೇಲ್ಕೂರ್, ರವಿ ಸುಬ್ರಹ್ಮಣ್ಯ, ರೇಣುಕಾಚಾರ್ಯ, ಕುಮಾರ್ ಬಂಗಾರಪ್ಪ, ರವಿಕುಮಾರ್ ಎಂ ಎಲ್ ಸಿ, ಸಚಿವ ಬಿ ಸಿ ನಾಗೇಶ್ , ಬಿಡಿಎ ವಿಶ್ವನಾಥ್, ಸಿ ಪಿ ಯೋಗೇಶ್ವರ್ ಆಗಮನ, ವಿಜಯೇಂದ್ರ, ರೂಪಾಲಿ ನಾಯಕ್ ಸೇರಿದಂತೆ ಐವತ್ತಕ್ಕೂ ಹೆಚ್ಚು ನಾಯಕರು ಭಾಗಿಯಾದರು‌.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ