ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶ್ರೀ ದೊಡ್ಡಣ್ಣ ಅವರು ಇದೇ ಗುರುವಾರ ದಿ.5 ರಂದು ಬೆಳಗಾವಿಗೆ ಆಗಮಿಸಲಿದ್ದು ಲಕ್ಷ್ಮೀ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠದಲ್ಲಿ ಕನ್ನಡ ಸಂಘ ಸಂಸ್ಥೆಗಳ ಸನ್ಮಾನವನ್ನು ಸ್ವೀಕರಿಸಲಿದ್ದಾರೆ.
ಮುಂಜಾನೆ 10.30 ಕ್ಕೆ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಸರಳ ಕಾರ್ಯಕ್ರಮದಲ್ಲಿ ದೊಡ್ಡಣ್ಣ ಅವರು ಕನ್ನಡ ನಾಡು, ನುಡಿ ಮತ್ತು ಗಡಿಯ ಕುರಿತು ಮಾತನಾಡಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಕಾರ್ಯಕರ್ತರು ಆಗಮಿಸಬೇಕೆಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹಾಗೂ ಇತರ ಕನ್ನಡ ಸಂಘಟನೆಗಳ ಪ್ರಮುಖರು ಕೋರಿದ್ದಾರೆ.