ಅಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ 100 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಡ ಕಟ್ಟಲಾಗುತ್ತಿದೆ. ಎರಡೂ ವರ್ಷ ಮುಂಚೆಯೇ ಪೂರ್ಣಗೊಳ್ಳಬೇಕಾಗಿದ್ದ ಕಾಮಗಾರಿ… ಸದ್ಯ ಈ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ..ಬೇಗನೆ ಕಾಮಗಾರಿ ಮುಗಿಸುವಂತೆ ಒತ್ತಾಯಿಸುತ್ತಿದ್ದಾರೆ.ಹೌದು ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪವಿಭಾಗದ ಜನರಿಗೆ ಅನುಕೂಲವಾಗಲಿ ಎಂದು ಸರ್ಕಾರ 20 ಕೋಟಿ ಅನುದಾನ ನೀಡಿ ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿಯ ಬಾಣಂತಿ ಕೋಡಿ ರಸ್ತೆ ಪಕ್ಕದಲ್ಲಿ ನಿರ್ಮಾಣ ವಾಗುತ್ತಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ 2016 ರಲ್ಲಿ ಶಂಕು ಸ್ಥಾಪನೆ ಮಾಡಿದ್ದು,
ಕಳೆದ ಎರಡು ವರ್ಷದ ಹಿಂದೆಯೆ ಆಸ್ಪತ್ರೆ ಪ್ರಾರಂಭವಾಗಬೇಕಿತ್ತು. ಆದರೆ,ಸ್ಥಳೀಯ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಆಸ್ಪತ್ರೆ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿರುವ ಪರಿಣಾಮ ಚಿಕ್ಕೋಡಿ ಉಪವಿಭಾಗದ ರಾಯಬಾಗ, ಅಥಣಿ, ಹುಕ್ಕೇರಿ, ನಿಪ್ಪಾಣಿ, ಕಾಗವಾಡ ಸುಮಾರು 17 ಲಕ್ಷಕ್ಕೂ ಅಧಿಕ ಜನಸಂಖ್ಯೆಯುಳ್ಳ ಈ ಗಡಿ ಭಾಗದಲ್ಲಿ ಜನರಿಗೆ ಈ ಆಸ್ಪತ್ರೆ ಉಪಯೋಗವಾಗಬೇಕಿತ್ತು ಆದರೆ, ಇನ್ನು ಕಾಮಗಾರಿ ಪೂರ್ಣಗೊಳ್ಳದೆ ಇಲ್ಲಿನ ರೋಗಿಗಳು ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಮೇಲೆ ಅವಲಂಬಿತರಾಗಿದ್ದಾರೆ..