ಬೆಂಗಳೂರು: ಕೆಜಿಎಫ್-2 ಚಿತ್ರದ ಭರ್ಜರಿ ಯಶಸ್ಸಿನ ನಂತರ ರಾಕಿಂಗ್ ಸ್ಟಾರ್ ಯಶ್ ಮತ್ತೆ ಸುದ್ದಿಯಲ್ಲಿದ್ದಾರೆ. ಹಲವಾರು ಹಿಟ್ ಚಿತ್ರಗಳನ್ನು ನೀಡಿರುವ ಈ ನಟ, ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಗುಸುಗುಸು ಸುದ್ದಿ ಹರಿದಾಡುತ್ತಿದೆ.
ಇದಕ್ಕೆ ಕಾರಣ ಯಶ್ ದಂಪತಿ ಗೋವಾಕ್ಕೆ ಭೇಟಿ ಕೊಟ್ಟ ಬಳಿಕ ಆಗಿರುವ ಬೆಳವಣಿಗೆ ಹಾಗೂ ಈಚೆಗೆ ಜ್ಯೋತಿಷಿ ನುಡಿದಿರುವ ಭವಿಷ್ಯ!
ಯಶ್ ಮತ್ತು ರಾಧಿಕಾ ಗೋವಾಕ್ಕೆ ಭೇಟಿ ಕೊಟ್ಟಾಗ ಅಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ. ಬಾಗಲಕೋಟ್ ಯಶಿಸಂ ಎನ್ನುವ ಇನ್ಸ್ಟಾಗ್ರಾಂ ಪೇಜ್ ಈ ಭೇಟಿಯ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದೆ. ಇದಕ್ಕೆ ‘ಯಶ್ ಬಾಸ್ ಗೋವಾ ಸಿಎಂ ಪ್ರಮೋದ್ ಸಾವಂತ್ ಹಾಗೂ ಕೆವಿಎನ್ ಪ್ರೊಡಕ್ಷನ್ ಜೊತೆ ಪಣಜಿಯಲ್ಲಿ’ ಎಂದು ಶೀರ್ಷಿಕೆ ಕೊಡಲಾಗಿದೆ. ಇದು ಯಶ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡುವ ಮುನ್ಸೂಚನೆ ಎಂದೇ ಬಣ್ಣಿಸಲಾಗುತ್ತಿದೆ.