ಬೆಂಗಳೂರು: ಬಜೆಟ್ ಅನುಷ್ಠಾನಕ್ಕೆ ಎಲ್ಲ ಇಲಾಖೆಗಳಿಗೂ ವೇಳಾಪಟ್ಟಿ ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪ್ರಸಕ್ತ ಸಾಲಿನ ಬಜೆಟ್ ಅನುಷ್ಠಾನಕ್ಕೆ ವೇಗ ನೀಡುವುದಕ್ಕಾಗಿ ಬುಧವಾರ ಇಲಾಖಾವಾರು ಸಭೆಗಳನ್ನು ಆರಂಭಿಸುವ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಜೆಟ್ ಘೋಷಣೆಗಳ ಅನುಷ್ಠಾನಕ್ಕಾಗಿ ಈಗಾಗಲೇ ಶೇಕಡ 80ರಷ್ಟು ಆದೇಶಗಳನ್ನು ಹೊರಡಿಸಲಾಗಿದೆ. ಉಳಿದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತ್ವರಿತವಾಗಿ ಆದೇಶ ಹೊರಡಿಸಲಾಗುವುದು’ ಎಂದರು.
ಎಲ್ಲ ಇಲಾಖೆಗಳಿಗೂ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ವೇಳಾಪಟ್ಟಿ ನೀಡಲಾಗುವುದು. ಅದೇ ಪ್ರಕಾರ ಕೆಲಸ ಮಾಡುವಂತೆ ಗುರಿ ನಿಗದಿಪಡಿಸಲಾಗುವುದು. ಕಾಲಕಾಲಕ್ಕೆ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.
ಬಜೆಟ್ ಅನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಕ್ಕೆ ತರುವ ಸಂಬಂಧ ಮುಂದಿನ ವಾರ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದರು.
ಶೇ 30ರಷ್ಟು ಮಂದಿ ಅಕ್ರಮದಲ್ಲಿ ಭಾಗಿ ಆಗಿರಬಹುದು. ಆದರೆ ಇನ್ನುಳಿದವರು ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿದ್ದಾರೆ ಎಂದು ಹೇಳಿದರು.