Breaking News

ಬಿಜೆಪಿ ಶಾಸಕ ಯತ್ನಾಳ್ ಕುತೂಹಲದ ಹೇಳಿಕೆ

Spread the love

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಬಿಜೆಪಿಯಲ್ಲಿ ಪ್ರಕ್ರಿಯೆ ಆರಂಭವಾಗಿದ್ದು, ನಾಲ್ವರಿಗೆ ಸಚಿವ ಸ್ಥಾನ, ನಾಲ್ವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿ, ಸಂಪುಟದ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಬೇಕೆಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ.

ಎಲ್ಲ ಸಮುದಾಯ ಮತ್ತು ಎಲ್ಲ ಜಿಲ್ಲೆಗಳಿಗೂ ಪ್ರಾತಿನಿಧ್ಯ ನೀಡುವ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಮಿಷನ್ 2023 ಗುರಿಯೊಂದಿಗೆ ಎಲ್ಲ ಜಿಲ್ಲೆಗಳಿಗೂ ಪ್ರಾತಿನಿಧ್ಯ ನೀಡುವ ಸಾಧ್ಯತೆ ಇದೆ. ಇದರ ಬಗ್ಗೆ ಕೇಂದ್ರ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ