ನವದೆಹಲಿ: ನಾಲ್ಕು ವರ್ಷದ ಬಳಿಕ ಸಾಲದ ಮೇಲಿನ ಬಡ್ಡಿ ದರ ಏರಿಕೆ ಮಾಡಲಾಗಿದೆ. ಹಣದುಬ್ಬರ ಹತ್ತಿಕ್ಕಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದಿಢೀರ್ ನಿರ್ಧಾರ ಕೈಗೊಂಡಿದೆ.
ರೆಪೋ ದರ ಶೇಕಡ 0.4 ರಷ್ಟು, ಸಿ.ಆರ್.ಆರ್. ದರ ಶೇಕಡ 0.5 ರಷ್ಟು ಹೆಚ್ಚಳವಾಗಿದೆ. ಇದರಿಂದ ಇಎಂಐ ತುಟ್ಟಿಯಾಗಲಿದೆ.
ಆರ್ಬಿಐ ಕೈಗೊಂಡ ಈ ಕ್ರಮದಿಂದ ವಾಹನ, ಗೃಹ ಮತ್ತು ಇತರೆ ಸಾಲಗಳ ಮೇಲಿನ ಬಡ್ಡಿ ದರಗಳು ಏರಿಕೆಯಾಗಲಿದೆ.
ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾದ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ. ಗೃಹ ಸಾಲ, ವಾಹನ ಸಾಲ ಮತ್ತು ವೈಯಕ್ತಿಕ ಸಾಲ ಪಡೆದವರಿಗೆ ಬಡ್ಡಿ ದರ ಏರಿಕೆಯ ಬಿಸಿ ತಟ್ಟಲಿದೆ ಎಂದು ಹೇಳಲಾಗಿದೆ.
Laxmi News 24×7