Home / ರಾಜಕೀಯ / ಮನೆ, ವಾಹನ, ಇತರೆ ಸಾಲಗಾರರಿಗೆ ಶಾಕಿಂಗ್ ನ್ಯೂಸ್: ತಟ್ಟಲಿದೆ ಬಡ್ಡಿ ದರದ ಬಿಸಿ

ಮನೆ, ವಾಹನ, ಇತರೆ ಸಾಲಗಾರರಿಗೆ ಶಾಕಿಂಗ್ ನ್ಯೂಸ್: ತಟ್ಟಲಿದೆ ಬಡ್ಡಿ ದರದ ಬಿಸಿ

Spread the love

ನವದೆಹಲಿ: ನಾಲ್ಕು ವರ್ಷದ ಬಳಿಕ ಸಾಲದ ಮೇಲಿನ ಬಡ್ಡಿ ದರ ಏರಿಕೆ ಮಾಡಲಾಗಿದೆ. ಹಣದುಬ್ಬರ ಹತ್ತಿಕ್ಕಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದಿಢೀರ್ ನಿರ್ಧಾರ ಕೈಗೊಂಡಿದೆ.

ರೆಪೋ ದರ ಶೇಕಡ 0.4 ರಷ್ಟು, ಸಿ.ಆರ್.ಆರ್. ದರ ಶೇಕಡ 0.5 ರಷ್ಟು ಹೆಚ್ಚಳವಾಗಿದೆ. ಇದರಿಂದ ಇಎಂಐ ತುಟ್ಟಿಯಾಗಲಿದೆ.

ಆರ್ಬಿಐ ಕೈಗೊಂಡ ಈ ಕ್ರಮದಿಂದ ವಾಹನ, ಗೃಹ ಮತ್ತು ಇತರೆ ಸಾಲಗಳ ಮೇಲಿನ ಬಡ್ಡಿ ದರಗಳು ಏರಿಕೆಯಾಗಲಿದೆ.

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾದ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ. ಗೃಹ ಸಾಲ, ವಾಹನ ಸಾಲ ಮತ್ತು ವೈಯಕ್ತಿಕ ಸಾಲ ಪಡೆದವರಿಗೆ ಬಡ್ಡಿ ದರ ಏರಿಕೆಯ ಬಿಸಿ ತಟ್ಟಲಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ