ಶಿರಸಿ : ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಲು ಮುಂದಾಗಿದ್ದು, ಶೀಘ್ರ ವೇತನ ಹೆಚ್ಚಳ ಮಾಡುವ ಬಗ್ಗೆ ಹಣಕಾಸು ಇಲಾಖೆ ಜೊತೆಗೆ ಚರ್ಚೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ.
ಶಿರಸಿ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಿ ನಂತ್ರ ಮಾತನಾಡಿದ ಸಚಿವರು, ವೇತನ ಹೆಚ್ಚಳದ ಬಗ್ಗೆ ಹಣಕಾಸು ಇಲಾಖೆ ಜತೆ ಚರ್ಚಿಸಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಾಗುವುದು, ‘ಸಾರಿಗೆ ಸಿಬ್ಬಂದಿಗೆ ಶೀಘ್ರ ವೇತನ ಹೆಚ್ಚಳದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಇನ್ನು ಪ್ರತಿ ತಿಂಗಳು ಸಂಬಳವಾಗದ ಸಮಸ್ಯೆ ಗಮನದಲ್ಲಿದೆ. ಸಕಾಲಕ್ಕೆ ವೇತನ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದರು.
Laxmi News 24×7