ಬೆಳಗಾವಿ: PSI ಹಗರಣದಲ್ಲಿ ರಾಜಕಾರಣಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಶಾಮೀಲಾಗಿರುವುದು ಕಂಡುಬಂದಿದೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.
ಇಲ್ಲಿನ ಗೋಕಾಕ್ ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ಹಗರಣದಲ್ಲಿ ಸಚಿವರು, ಶಾಸಕರ ಹೆಸರು ಕೇಳಿಬಂದಿದೆ. ನೆನ್ನೆಯಷ್ಟೇ ಮಾಜಿ ಸಿಎಂ ಪುತ್ರನ ಹೆಸರೂ ಕೇಳಿ ಬಂದಿದೆ. ಪೊಲೀಸರೂ ಭಾಗಿಯಾಗಿರುವ ಈ ಪ್ರಕರಣದಲ್ಲಿ ಸರ್ಕಾರ ಪೊಲೀಸರಿಂದಲೇ ತನಿಖೆ ನಡೆಸುವುದು ಎಷ್ಟರಮಟ್ಟಿಗೆ ಸೂಕ್ತ ಎಂದು ಪ್ರಶ್ನಿಸಿದ್ದಾರೆ.
ಒಂದೇ ಕೇಂದ್ರದಲ್ಲಿ ಪರಿಕ್ಷೆ ಬರೆದ ಅತಿಹೆಚ್ಚು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಈಗಾಗಲೇ ಬ್ಲೂಟೂತ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವುದು ಬಯಲಾಗಿದೆ. ಇದೆಲ್ಲವನ್ನು ಪ್ರಾಮಾಣಿಕವಾಗಿ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಸೂಕ್ತ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.