Breaking News

PSI ಹಗರಣ CBI ತನಿಖೆಗೆ ಒಪ್ಪಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹ

Spread the love

ಬೆಳಗಾವಿ: PSI ಹಗರಣದಲ್ಲಿ ರಾಜಕಾರಣಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಶಾಮೀಲಾಗಿರುವುದು ಕಂಡುಬಂದಿದೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.

PSI SCAM

ಇಲ್ಲಿನ ಗೋಕಾಕ್‌ ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ಹಗರಣದಲ್ಲಿ ಸಚಿವರು, ಶಾಸಕರ ಹೆಸರು ಕೇಳಿಬಂದಿದೆ. ನೆನ್ನೆಯಷ್ಟೇ ಮಾಜಿ ಸಿಎಂ ಪುತ್ರನ ಹೆಸರೂ ಕೇಳಿ ಬಂದಿದೆ. ಪೊಲೀಸರೂ ಭಾಗಿಯಾಗಿರುವ ಈ ಪ್ರಕರಣದಲ್ಲಿ ಸರ್ಕಾರ ಪೊಲೀಸರಿಂದಲೇ ತನಿಖೆ ನಡೆಸುವುದು ಎಷ್ಟರಮಟ್ಟಿಗೆ ಸೂಕ್ತ ಎಂದು ಪ್ರಶ್ನಿಸಿದ್ದಾರೆ. 

ಒಂದೇ ಕೇಂದ್ರದಲ್ಲಿ ಪರಿಕ್ಷೆ ಬರೆದ ಅತಿಹೆಚ್ಚು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಈಗಾಗಲೇ ಬ್ಲೂಟೂತ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವುದು ಬಯಲಾಗಿದೆ. ಇದೆಲ್ಲವನ್ನು ಪ್ರಾಮಾಣಿಕವಾಗಿ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಸೂಕ್ತ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ