Breaking News

ರಾಜ್ಯ ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್: ಡಿ.31, 2022ರೊಳಗೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಉತ್ತೀರ್ಣ ಕಡ್ಡಾಯ

Spread the love

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ( Karnataka Government Employees ) ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ( Computer Literacy Test ) ಉತ್ತೀರ್ಣರಾಗುವುದು ಕಡ್ಡಾಯಗೊಳಿಸಲಾಗಿದೆ. ಈ ಪರೀಕ್ಷೆ ಉತ್ತೀರ್ಣಕ್ಕೆ ಹತ್ತು ವರ್ಷಗಳ ಅವಧಿಯೊಳಗೆ ಪಾಸ್ ಆಗುವುದು ಕಡ್ಡಾಯಗೊಳಿಸಲಾಗಿತ್ತು.

ಆದ್ರೇ.. ಇದೀಗ ದಿನಾಂಕ 31-12-2022ರೊಳಗೆ ಉತ್ತೀರ್ಣಗೊಳಿಸೋದನ್ನು ಕಡ್ಡಾಯಗೊಳಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಯಾವುದೇ ಸರ್ಕಾರಿ ನೌಕರನು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ ಎಂದು ತಿಳಿಸಿದೆ.

ಈ ನಿಯಮ ಪ್ರಾರಂಭವಾದ ದಿನಾಂಕದಿಂದ ಹತ್ತು ವರ್ಷಗಳ ಅವಧಿಯೊಳಗೆ ಪರೀಕ್ಷೆಯಲ್ಲಿ ಉತ್ತೀರ್ಣನಾಗದೇ ಇದ್ದಲ್ಲಿ, ಮುಂಬಡ್ತಿಗೆ ಅರ್ಹನಾಗತಕ್ಕದ್ದಲ್ಲ ಎಂಬುದಾಗಿ ತಿಳಿಸಿತ್ತು. ಜೊತೆಗೆ ಯಾವುದೇ ಸರ್ಕಾರಿ ನೌಕರನು, ಈ ನಿಯಮಗಳ ಪ್ರಾರಂಭದ ದಿನಾಂಕದಿಂದ ಹನ್ನೊಂದು ವರ್ಷಗಳ ಅವಧಿಯೊಳಗೆ ಪರೀಕ್ಷೆಯಲ್ಲಿ ಉತ್ತೀರ್ಣನಾಗದೇ ಇದ್ದಲ್ಲಿ, ವಾರ್ಷಿಕ ವೇತನ ಬಡ್ತಿ ಗಳಿಸಲು ಅರ್ಹನಾಗತಕ್ಕದ್ದಲ್ಲ ಎಂದಿತ್ತು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ