Breaking News

ನಿಮ್ಹಾನ್ಸ್ ಗೂ ಕಾಲಿಟ್ಟ ಕೊರೊನಾ, ಆ್ಯಂಬುಲೆನ್ಸ್ ಡ್ರೈವರ್ ಹಾಗೂ 30 ಸಿಬ್ಬಂದಿಗೆ ಪಾಸಿಟಿವ್

Spread the love

ಬೆಂಗಳೂರು, ಜು.6-ನಿಮ್ಹಾನ್ಸ್ ಆಸ್ಪತ್ರೆಯ ಆ್ಯಂಬುಲೆನ್ಸ್ ಡ್ರೈವರ್ ಹಾಗೂ 30 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಿಮ್ಹಾನ್ಸ್ ಆಸ್ಪತ್ರೆಯ ವೈದ್ಯರು, ಸ್ಟಾಫ್ ನರ್ಸ್, ಚಾಲಕ ಹಾಗೂ ಸಿಬ್ಬಂದಿಗೆ ಕೊರೊನಾ ವೈರಸ್ ತಗುಲಿದೆ. ಸುಮಾರು 30 ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ಇಲ್ಲಿ ಆತಂಕ ಹೆಚ್ಚಾಗಿದೆ.

ಕೊರೊನಾ ಪಾಸಿಟಿವ್ ಆಗಿದ್ದ ವ್ಯಕ್ತಿಗಳನ್ನು ಕೆಲ ಸಿಬ್ಬಂದಿ ಐಸೊಲೇಷನ್ ಮಾಡಿದ್ದರು. ಹೀಗಾಗಿ ಅವರಿಗೂ ಸೋಂಕು ತಗುಲಿದೆ. ಆ್ಯಂಬುಲೆನ್ಸ್ ಡ್ರೈವರ್ ಮತ್ತು ಸಿಬ್ಬಂದಿ ಭೈರಸಂದ್ರದಲ್ಲಿರುವ ಕ್ವಾಟ್ರರ್ಸ್‍ನಲ್ಲಿ ವಾಸವಾಗಿದ್ದು, ಇದೀಗ ಕ್ವಾಟ್ರರ್ಸ್ ನಿವಾಸಿಗಳಿಗೂ ಆತಂಕ ಎದುರಾಗಿದೆ. ಆ್ಯಂಬುಲೆನ್ಸ್ ಚಾಲಕ, ಮತ್ತೊಬ್ಬರಿಗೆ ಸೋಂಕು ತಗುಲಿದ್ದರೂ ಕ್ವಾಟ್ರರ್ಸ್ ಸೀಲ್‍ಡೌನ್ ಮಾಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ