ಯಾದಗಿರಿ: ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ ಯಾದಗಿರಿ ನಗರದ ಹೊರವಲಯದ ಗುರುಸಣಗಿ ಬ್ರಿಡ್ಜ್ ಬಳಿ ಸಂಜೆ ನಡೆದಿದೆ.
ನಗರದ ಹೊರವಲಯದ ಗುರಸಣಗಿ ಬ್ರಿಡ್ಜ್ ಬಳಿಯ ಭೀಮಾ ನದಿಗೆ ಈಜಲು ಐವರು ಸ್ನೇಹಿತರು ತೆರಳಿದ್ದಾರೆ. ಇದರಲ್ಲಿ ಅಬ್ದುಲ್‍ನನ್ನು ದಡದಲ್ಲಿ ನಿಲ್ಲಿಸಿ, ಯಾದಗಿರಿಯ ಅಮಾನ್ (16), ಅಯಾನ್ (16), ರೆಹಮಾನ್ (16), ಕಲಬುರಗಿ ಮೂಲದ ರೆಹಮಾನ್ (15 ) ನಾಲ್ವರು ನದಿಗೆ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನ ರಭಸ ಜಾಸ್ತಿಯಾದ ಪರಿಣಾಮ ನಾಲ್ವರು ನೀರುಪಾಲಾಗಿದ್ದಾರೆ.ಸುದ್ದಿ ತಿಳಿದು ಸ್ಥಳಕ್ಕೆ ಡಿಸಿ ರಾಗಪ್ರಿಯ, ಎಸ್‍ಪಿ ಋಷಿಕೇಶ್ ಸೋನವಣೆ, ಎಐಡಿಸಿ ಪ್ರಕಾಶ್ ರಜಪೂತ್, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಸಂಜೆ ಹೊತ್ತಿನಲ್ಲೆ ಅಗ್ನಿಶಾಮಕ ದಳದಿಂದ ಯುವಕರಿಗಾಗಿ ಶೋಧ ಕಾರ್ಯ ನಡೆಯಿತು.
ಆದರೆ ಕತ್ತಲು ಹೆಚ್ಚಾದ ಹಿನ್ನೆಲೆ ಕಾರ್ಯಾಚರಣೆ ನಿಲ್ಲಿಸಲಾಗಿದೆ. ಬೆಳಿಗ್ಗೆಯಿಂದ ಮತ್ತೆ ವಿಶೇಷ ಬೋಟ್ ಮತ್ತು ನುರಿತ ಈಜುಗಾರ ಮೂಲಕ ಶೋಧ ಕಾರ್ಯಾಚರಣೆ ಮಾಡಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ.