Breaking News

ರಾಜ್ಯ ಸರ್ಕಾರಿ ನೌಕರ ಸಂಘ ಹುಕ್ಕೇರಿ ತಾಲೂಕು ಘಟಕದ ಅಧ್ಯಕ್ಷರಾಗಿ ಅವಿನಾಶ್ ಆಯ್ಕೆ

Spread the love

ಚಿಕ್ಕೋಡಿ(ಬೆಳಗಾವಿ): ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಹುಕ್ಕೇರಿ ತಾಲೂಕಾ ಘಟಕದ ನೂತನ ಅಧ್ಯಕ್ಷರಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಇಲಾಖೆ ನೌಕರ ಅವಿನಾಶ್ ಹೊಳೆಪ್ಪಗೋಳ ಅವಿರೋಧ ಆಯ್ಕೆಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಜರಗಿದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಯಾರು ನಾಮಪತ್ರ ಸಲ್ಲಿಸದ ಹಿನ್ನಲೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಜಗದೀಶ್ ಗೌಡ ಪಾಟೀಲ್ ಅವರ ಸಮ್ಮುಖದಲ್ಲಿ ಅವಿನಾಶ್ ಅವರನ್ನು ತಾಲೂಕು ಅಧ್ಯಕ್ಷರನ್ನಾಗಿ ಚುನಾವಣಾ ಅಧಿಕಾರಿ ಚಂದ್ರಶೇಖರ್ ಕೋಲಕಾರ ಘೋಷಣೆ ಮಾಡಿದರು.

ನೂತನ ಖಜಾಂಚಿಯಾಗಿ ಲೋಕೋಪಯೋಗಿ ಇಲಾಖೆಯ ವಿ.ಎಸ್ ಹಿರೇಮಠ ಹಾಗೂ ರಾಜ್ಯ ಪರಿಷತ್ ಸದಸ್ಯರಾಗಿ ಆರೋಗ್ಯ ಇಲಾಖೆಯ ಸಂತೋಷ ಪಾಟೀಲ್ ಅವರು ಆಯ್ಕೆಯಾದರು. ಈ ಸಂಧರ್ಭದಲ್ಲಿ ನೂತನ ಅಧ್ಯಕ್ಷ ಅವಿನಾಶ್ ಹೊಳೆಪ್ಪಗೋಳ ಮಾತನಾಡಿ, ರಾಜ್ಯಾಧ್ಯಕ್ಷ  ಸಿ ಎಸ್ ಷಡಾಕ್ಷರಿ ಹಾಗೂ ಜಿಲ್ಲಾಧ್ಯಕ್ಷ ಜಗದೀಶ್ ಗೌಡ ಪಾಟೀಲ್ ಅವರ ಮಾರ್ಗದರ್ಶದಲ್ಲಿ ಅವರ ನೇತೃತ್ವದಲ್ಲಿ ತಾಲೂಕಾ ನೌಕರ ಸಂಘ ಕ್ರಿಯಾಶೀಲ ಕಾರ್ಯ ನಿರ್ವಸುತ್ತದೆ. ಸಂಘವನ್ನ ಬಲಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಲ್ಲದೆ ತಾಲೂಕಿನಲ್ಲಿಯ ಸರ್ಕಾರಿ ನೌಕರರ ಶ್ರೇಯೋಭಿವೃದ್ಧಿಗಾಗಿ ಸಂಘ ಯಾವುದೇ ರೀತಿಯ ಹೋರಾಟಕ್ಕೆ ಸಿದ್ಧವಿದೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ