Breaking News

ರಾಜ್ಯದ ಜನತೆಗೆ ಸಿಹಿಸುದ್ದಿ : ಅಕ್ಟೋಬರ್ 2 ಕ್ಕೆ `ಯಶಸ್ವಿನಿ ಯೋಜನೆ’ ಉದ್ಘಾಟನೆ : ಸಿಎಂ ಬೊಮ್ಮಾಯಿ

Spread the love

ಬೆಂಗಳೂರು : ಅಕ್ಟೋಬರ್ 2 ರಂದು ಯಶಸ್ವಿನಿ ಯೋಜನೆಯನ್ನು ಉದ್ಘಾಟನೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳಿಗೆ ಜುಲೈ ತಿಂಗಳೊಳಗೆ ಫಲಾನುಭವಿಗಳ ಆಯ್ಕೆಯನ್ನು ಪೂರ್ಣಗೊಳಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

 

ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಬೊಮ್ಮಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಯೋಜನೆಗಳಿಗೆ ಜುಲೈ ತಿಂಗಳೊಳಗಾಗಿ ಫಲಾನುಭವಿಗಳ ಆಯ್ಕೆಯನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು. ಪ್ರಾಥಮಿಕ ಶಿಕ್ಷಣ ಇಲಾಖೆಯ ಶಾಲೆಗಳಲ್ಲಿ ಆರು ಸಾವಿರದ ಐದನೂರಕ್ಕೂ ಹೆಚ್ಚು ಕೊಠಡಿಗಳ ನಿರ್ಮಾಣ ಕಾರ್ಯವನ್ನು ಅಂದಾಜು ೧ ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ