ಮಡಿಕೇರಿ: ಹಿಜಬ್ ಪ್ರಕರಣದಿಂದ ರಾಜ್ಯದಲ್ಲಿ ದೊಡ್ಡಮಟ್ಟದ ಚಿಂತನಾ ಮಂಥನ ಉಂಟಾಗಿದ್ದು, ಇದರಿಂದ ಹಿಂದೂ ಸಮಾಜ ಜಾಗೃತವಾಗುತ್ತಿದೆ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಕೊಡಗಿನ ಕುಶಾಲನಗರದ ಖಾಸಗಿ ಸಭಾಂಗಣದಲ್ಲಿ ಮಾತನಾಡಿದ ಅವರು, ಇಲ್ಲಿವರೆಗೆ ಎಡವಿರುವ ಹಿಂದೂ ಸಮಾಜ ಸುಧಾರಿಸಿಕೊಳ್ಳುತ್ತಿದೆ. ಇಲ್ಲಿವರೆಗಿನ ಹಿಂದೂ ಸಂಘಟನೆಗಳ ಜಾಗೃತಿ ಹೋರಾಟ ಯಶಸ್ವಿಯಾಗಿದೆ. ಮುಂದೆ ವಕ್ಛ್ ಬೋರ್ಡ್ ಗೋಲ್ಮಾಲ್, ಅಜಾನ್ ಮೈಕ್ ಕಿರಿಕಿರಿ, ಗೋಹತ್ಯೆ, ಬೈಬಲ್ ಬೋಧನೆ ವಿರೋಧಿ ಹೋರಾಟ ಮತ್ತು ಮತಾಂತರ ನಿಷೇದ ಕಾಯ್ದೆ ಜಾರಿಗೆ ಒತ್ತಾಯಿಸಿ ಹೋರಾಟ ಮುಂದುವರಿಯಲಿದೆ ಎಂದರು.
Laxmi News 24×7