ಬೆಳಗಾವಿ ಜಿಲ್ಲೆ): ಸಚಿವ ಸಂಪುಟ ಪುನರ್‌ರಚನೆ ಮಾತುಗಳು ಕೇಳಿಬರುತ್ತಿರುವ ನಡುವೆ, ಆಕಾಂಕ್ಷಿಗಳಾಗಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ಕಾಗವಾಡದ ಶಾಸಕ ಶ್ರೀಮಂತ ಪಾಟೀಲ ಇಲ್ಲಿ ಮಾತುಕತೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಚಿವ ಸ್ಥಾನ ಕೊಡುವುದು, ಬಿಡುವುದು ಮುಖ್ಯಮಂತ್ರಿ ಮತ್ತು ಹೈಕಮಾಂಡ್‌ಗೆ ಬಿಟ್ಟಿದ್ದು’ ಎಂದು ಪ್ರತಿಕ್ರಿಯಿಸಿದರು.
‘ಅಥಣಿ ಶಾಸಕ ಮಹೇಶ ಕುಮಠಳ್ಳಿ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಮಂತ್ರಿ ಸ್ಥಾನ ಬೇಡ; ಕ್ಷೇತ್ರದಲ್ಲಿ ನೀರಾವರಿ ಯೋಜನೆ ಅನುಷ್ಠಾನವಾದರೆ ಸಾಕು ಎಂದಿದ್ದಾರೆ. ಮರಾಠಾ ಸಮುದಾಯದಕ್ಕೆ ಸಚಿವ ಸ್ಥಾನ ಕೊಡಬೇಕೆಂದು ಪಕ್ಷದ ವೇದಿಕೆಯಲ್ಲಿ ಮಾತನಾಡಿದ್ದೇನೆ. ಶೀಘ್ರದಲ್ಲೇ ಒಳ್ಳೆಯ ಸುದ್ದಿ ಬರಲಿದೆ’ ಎಂದು ಹೇಳಿದರು.
‘ಮಾಸಂತ್ಯ ಅಥವಾ ಜೂನ್‌ನಲ್ಲಿ ಗೋಕಾಕದಲ್ಲಿ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಸುವ ಯೋಜನೆ ಇದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್, ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಆಗಸ್ಟ್‌ನಲ್ಲಿ ಅಹಿಂದ ಸಮಾವೇಶ ನಡೆಸಲಾಗುವುದು. 4ರಿಂದ 5 ಲಕ್ಷ ಮಂದಿ ಸೇರಿಸಲಾಗುವುದು’ ಎಂದರು.