ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ) ಜಾರ್ಖಂಡ್ ನ ಹಿರಿಯ ಐಎಎಸ್ ಅಧಿಕಾರಿ ಮತ್ತು ಜಾರ್ಖಂಡ್ ನ ಗಣಿ ಇಲಾಖೆ ಕಾರ್ಯದರ್ಶಿ ಪೂಜಾ ಸಿಂಘಾಲ್, ಅವರ ಪತಿ ಮತ್ತು ಇತರ ನಿಕಟ ಸಂಬಂಧಿಗಳ ಮನೆ ಮೇಲೆ ದಾಳಿ ನಡೆಸಿ ಸುಮಾರು 19.31 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದೆ.
ಜಾರ್ಖಂಡ್, ಬಿಹಾರ, ದೆಹಲಿ ಹಾಗೂ ಇತರ ನಗರಗಳ 18 ಸ್ಥಳಗಳಲ್ಲಿ ದಾಳಿ ನಡೆಸಿದ ಇಡಿ, ಒಟ್ಟು 19.31 ಕೋಟಿ ನಗದನ್ನು ವಶಪಡಿಸಿಕೊಂಡಿದೆ. ಅದರಲ್ಲಿ 17 ಕೋಟಿ ಸಿಂಘಾಲ್ ಅವರ ಚಾರ್ಟರ್ಡ್ ಅಕೌಂಟೆಂಟ್ ಸುಮನ್ ಕುಮಾರ್ ಅವರ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ.
ಮತ್ತೊಂದು ಸ್ಥಳದಲ್ಲಿ ದಾಳಿ ಮಾಡಿ 1.8 ಕೋಟಿ ರೂ ವಶಕ್ಕೆ ತೆಗೆದುಕೊಂಡಿದೆ.