Breaking News
Home / ರಾಜಕೀಯ / ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಿ

ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಿ

Spread the love

ಬೆಳಗಾವಿ: ‘ಜಿಲ್ಲೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಬೇಕು’ ಎಂದು ರಾಷ್ಟೀಯ ಹಸಿರು ನ್ಯಾಯಮಂಡಳಿಯ ರಾಜ್ಯಮಟ್ಟದ ಸಮಿತಿಯ ಅಧ್ಯಕ್ಷ ಸುಭಾಷ ಬಿ.ಅಡಿ ಸೂಚಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ‘ಮಾಲಿನ್ಯ ನಿಯಂತ್ರಣ ಜಿಲ್ಲಾ ಮಟ್ಟದ ಕಾರ್ಯಪಡೆ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 

‘ಅಂಗಡಿ, ಮಳಿಗೆಗಳು ಹಾಗೂ ಮಾಲ್‌ಗಳಿಗೆ ತೆರಳಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಸೂಚಿಸಬೇಕು. ಮಾರುವುದು ಕಂಡುಬಂದಲ್ಲಿ, ವ್ಯಾಪಾರಸ್ಥರಿಗೆ ದಂಡ ವಿಧಿಸಬೇಕು’ ಎಂದು ನಿರ್ದೇಶನ ನೀಡಿದರು.

‘ತ್ಯಾಜ್ಯ ವಿಂಗಡಣೆ, ವಿಲೇವಾರಿ ಖಚಿತಪಡಿಸಿಕೊಳ್ಳಲು ಸ್ಥಳೀಯ ಸಂಸ್ಥೆಗಳು, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯ್ತಿಗಳವರು ಜವಾಬ್ದಾರಿ ತೆಗೆದುಕೊಳ್ಳಬೇಕು. ತ್ಯಾಜ್ಯ ವಿಲೇವಾರಿ ಕುರಿತು ಜನರಲ್ಲಿ ಅರಿವು ಮೂಡಿಸಿ, ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ