Breaking News

ಮಸೀದಿಗಳ ಮೈಕ್ ತೆರವಿಗೆ ನಾಳೆಯೇ ಡೆಡ್‍ಲೈನ್ – ದೇಗುಲಗಳಲ್ಲಿ 3 ಬಾರಿ ಮಂತ್ರ ಘೋಷ

Spread the love

ಬೆಂಗಳೂರು: ಹಿಜಬ್, ಹಲಾಲ್, ವ್ಯಾಪಾರ ಬ್ಯಾನ್ ಬಳಿಕ ರಾಜ್ಯದಲ್ಲಿ ಆಜಾನ್ ಗಲಾಟೆ ತಾರಕಕ್ಕೇರಿದೆ. ಆಜಾನ್ ಕೂಗಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ನಾಳೆಯಿಂದ ಬೆಳಗ್ಗೆ 5 ಹಿಂದೂ ದೇವಾಲಯಗಳಲ್ಲಿ, ಮಠಗಳಲ್ಲಿ ಹನುಮಾನ್ ಚಾಲೀಸಾ, ಭಜನೆ ಹಾಗೂ ಸುಪ್ರಭಾತವನ್ನು, ಮೈಕ್ ಮೂಲಕ ಪಠಿಸುವ ಆಂದೋಲನಕ್ಕೆ ಶ್ರೀರಾಮ ಸೇನೆ ಮುಂದಾಗಿದೆ. ಈ ಅಭಿಯಾನಕ್ಕೆ ಕೈಜೋಡಿಸುವಂತೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಮನವಿ ಮಾಡುತ್ತಿದ್ದಾರೆ.

ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯ ಪ್ರಮುಖ ದೇವಸ್ಥಾನ ಮತ್ತು ಮಠಗಳಿಗೆ ಭೇಟಿ ನೀಡಿದ ಶ್ರೀರಾಮಸೇನೆ ಸದಸ್ಯರು ಬೆಳಗ್ಗಿನ ಜಾವ ದೇವಸ್ಥಾನ ಮತ್ತು ಮಠದ ಮೈಕ್‍ನಲ್ಲಿ ಸುಪ್ರಭಾತ, ಹನುಮಾನ್ ಚಾಲೀಸಾ, ಭಕ್ತಿಗೀತೆಗಳನ್ನು ಹಾಕುವಂತೆ ಮನವಿ ಪತ್ರ ನೀಡುತ್ತಿದ್ದಾರೆ. ಹಾಸನದಲ್ಲೂ ಅಭಿಯಾನಕ್ಕೆ ಕೈ ಜೋಡಿಸಲಿದ್ದು, ಪ್ರತಿನಿತ್ಯ ಮೈಕ್ ಮೂಲಕ ಭಜನೆ ಮಾಡುವುದಾಗಿ ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ಜಾನೆಕೆರೆ ಹೇಮಂತ್ ತಿಳಿಸಿದರು.ಇತ್ತ ಆಜಾನ್ ವಿರುದ್ಧ ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸಾ ಹಾಗೂ ಭಕ್ತಿಗೀತೆ ಮೊಳಗಿಸುವ ಅಭಿಯಾನಕ್ಕೆ ಧಾರವಾಡದಲ್ಲಿ ಬೆಂಬಲ ವ್ಯಕ್ತವಾಗಿದೆ. ಧಾರವಾಡ ನಗರದ ಲೈನ್ ಬಜಾರ್ ಹನುಮಾನ್ ದೇವಸ್ಥಾನ, ನಗರದ ತುಳಜಾ ಭವಾನಿ ದೇವಸ್ಥಾನ, ಶಿವಾಲಯ, ದತ್ತಾತ್ರೇಯ ದೇವಸ್ಥಾನ ಸೇರಿ ಹಲವು ದೇವಸ್ಥಾನ ಕಮಿಟಿಯವರು ನಿರ್ಧರಿಸಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ