Breaking News

19 ಲಕ್ಷ ಇವಿಎಂ ಯಂತ್ರಗಳು ಕಾಣೆ : ತನಿಖೆಗೆ ಒತ್ತಾಯಿಸಿದ ಕಾಂಗ್ರೆಸ್ ನಿಯೋಗ

Spread the love

ಬೆಂಗಳೂರು: ದೇಶದಲ್ಲಿ ಸುಮಾರು 19 ಲಕ್ಷ ಇವಿಎಂ ಯಂತ್ರಗಳು ಕಾಣೆಯಾಗಿದ್ದು ಈ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಧೀಶರ ನೇತ್ವದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಮಾಜಿ ಸಚಿವ ಎಚ್.ಕೆ.ಪಾಟೀಲ್ ನೇತೃತ್ವದ ಕಾಂಗ್ರೆಸ್ ನಿಯೋಗ ಭಾನುವಾರ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ತನಿಖೆಗೆ ಒತ್ತಾಯಿಸಿತು.

19 ಲಕ್ಷ ಇವಿಎಂ ಯಂತ್ರಗಳ ಕಾಣೆಯಾಗಿರುವ ಬಗ್ಗೆ 2,750 ಪುಟಗಳ ದಾಖಲೆಯನ್ನು ಸಲ್ಲಿಸಿ, ಈ ಬಗ್ಗೆ ಚುನಾವಣಾ ಆಯೋಗಕ್ಕೆ ಸಮನ್ಸ್ ನೀಡುವಂತೆ ಮನವಿ ಮಾಡಿತು.

ಸ್ವತಂತ್ರವಾದ ತನಿಖೆ ನಡೆಯಬೇಕು ಎಂದು ಮನವಿ ಮಾಡಿತು.

ಬಹಳಷ್ಟು ಜನರಿಗೆ ಅನುಮಾನ

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಕೆ. ಪಾಟೀಲ್, ಇಂದು ನಮ್ಮ ಸಭಾಧ್ಯಕ್ಷರನ್ನು ಭೇಟಿ ಮಾಡಿದ್ದೇವೆ. 19 ಲಕ್ಷ ಇವಿಎಂ ಯಂತ್ರಗಳು ಕಾಣೆಯಾಗಿರುವ ಬಗ್ಗೆ ಪುರಾವೆಗಳು ಮತ್ತು ಕಾಗದ ಪತ್ರಗಳನ್ನು ನೀಡಿದ್ದೇವೆ. ವಿಧಾನಸಭೆಯಲ್ಲಿ ಚುನಾವಣಾ ಸುಧಾರಣೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ‌. ನಾನು ಸಹ ಚರ್ಚೆಯಲ್ಲಿ ಭಾಗಿಯಾಗಿದ್ದೆ. ಹಲವಾರು ಸದಸ್ಯರು ತಮ್ಮ ಅಭಿಪ್ರಾಯ ತಿಳಿಸಿದ್ದರು. ನಾನು ಮಾತಾಡುವಾಗ ಸದನದ ನಾಲ್ಕೈದು ವಿಷಯಗಳನ್ನು ಪ್ರಸ್ತಾಪ ಮಾಡಿದ್ದೆ. ಮೊದಲನೆದ್ದು EVM ಯಂತ್ರಗಳು
ಕಾಣೆಯಾಗಿರಯವ ಬಗ್ಗೆ ಪ್ರಸ್ತಾಪ ಮಾಡಿದ್ದೆ‌. ನ್ಯಾಯಾಲಯಗಳಲ್ಲಿ ಎಲೆಕ್ಷನ್ ಅರ್ಜಿಗಳ ವಿಚಾರಣೆಗೆ ತಡವಾಗುವವ ಬಗ್ಗೆ ಇವಿಎಂ ಮಿಷನ್ ಹ್ಯಾಕ್ ಮಾಡುವ ಬಗ್ಗೆ ಬಹಳಷ್ಟು ಜನರಿಗೆ ಅನುಮಾನವಿದೆ. ಇದನ್ನು ಹೋಗಲಾಡಿಬೇಕಾದರೆ ಎಥಿಕಲ್ ಹ್ಯಾಕ್ಥನ್ ಆಗಬೇಕು ಎಂದರು.

ಎಲೆಕ್ಷನ್ ಕಮಿಷನ್ ಆಫ್ ಇಂಡಿಯಾ ತನಿಖೆ ಮಾಡಬೇಕು. ಚುನಾವಣೆಗಳ ಅಕ್ರಮಗಳ ಬಗ್ಗೆ ಪ್ರಸ್ತಾಪ ಮಾಡಿದ್ದೆ‌,19 ಲಕ್ಷ ಇವಿಎಂ ಮಿಷನ್ ಗಳನ್ನು ಕಾಣೆಯಾಗಿರುವ ಬಗ್ಗೆ ಕೇಂದ್ರ ಸರ್ಕಾರ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಒತ್ತಾಯ ಮಾಡಿದ್ದೇವೆ. ಇದಕ್ಕೆ ಪೂರಕವಾಗಿ 2750 ಪುಟಗಳ ಕಾಗದ ಪತ್ರಗಳನ್ನು ಸಲ್ಲಿಕೆ ಮಾಡಿದ್ದೇನೆ. ಮನೊರಂಜನ್ ಸಂತೋಷ್ ರಾಯ್ ಪಿಎಲ್ ಮಾಡಿದ್ದರು. ಅದರ ಮಾಹಿತಿಗಳನ್ನು ಸ್ಪೀಕರ್ ಅವರಿಗೆ ಮಾಡಿದ್ದೇನೆ ಎಂದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ