ರಾಯಚೂರು: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ತಿಳಿಸಿದರು.
ಜಿಲ್ಲೆಯ ಸಿಂಧನೂರಿನಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸಿಂಧನೂರಿನಿಂದ ಸ್ಪರ್ಧೆ ವಿಚಾರ ನಮ್ಮ ಮುಂದೆಯಿಲ್ಲ. ನಾನು ಅಥವಾ ನನ್ನ ಶ್ರೀಮತಿ ಎಲೆಕ್ಷನ್‍ಗೆ ನಿಲ್ಲುವ ಯಾವುದೇ ನಿರ್ಧಾರ ಮಾಡಿಲ್ಲ ಎಂದ ಅವರು, ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸೋದಾಗಿ ಹೇಳಿದರು.ಪಕ್ಷ ಏನೇ ನಿರ್ಧಾರ ಮಾಡಿದರೂ ಅದಕ್ಕೆ ಬದ್ಧನಾಗಿರುತ್ತೇನೆ ಎಂದ ಅವರು ಸಿಂಧನೂರಿನ ಗಾಂಧಿ ನಗರದ ಸ್ಪಟಿಕ ಲಿಂಗ ಮಹಾಗಿರಿ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ. ರಾಜಕೀಯ ವಿಚಾರಕ್ಕಾಗಿ ಇಲ್ಲಿಗೆ ಬಂದಿಲ್ಲ. ಹೀಗಾಗಿ ರಾಜಕೀಯ ವಿಚಾರ ಮಾತನಾಡುವುದಿಲ್ಲ ಎಂದು ತಿಳಿಸಿದರು.