Breaking News

ವಿಶ್ವ ತಾಯಂದಿರ ದಿನಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಗರ್ಭಿಣಿ ತಾಯಿಯರಿಗೆ ಸೀಮಂತ ಶಾಸ್ತ್ರ

Spread the love

ಬೆಂಗಳೂರು: ವಿಶ್ವ ತಾಯಂದಿರ ದಿನಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಗರ್ಭಿಣಿ ತಾಯಿಯರಿಗೆ ಸೀಮಂತ ಶಾಸ್ತ್ರ ಕಾರ್ಯಕ್ರಮವನ್ನು ಸಾಂಪ್ರದಾಯಿಕವಾಗಿ ನೆರವೇರಿಸಲಾಯಿತು.

ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯ ಎಂಇಐ ಮೈದಾನದಲ್ಲಿ ಯಾವುದೇ ಸಮಸ್ಯೆಗಳು ಎದುರಾಗದಂತೆ ಮೃತ್ಯುಂಜಯ, ಗಣಪತಿ ಹೋಮ ಹವನ ಮಾಡುವ ಮೂಲಕ ದೇವರಿಗೆ ಪೂಜೆ ಸಲ್ಲಿಸಿ ಸಾಮೂಹಿಕವಾಗಿ ಸೀಮಂತ ಶಾಸ್ತ್ರ ಮಾಡಲಾಯಿತು. ಟಿ. ದಾಸರಹಳ್ಳಿಯ ಕಾಂಗ್ರೆಸ್ ಮುಖಂಡೆ ಗೀತಾ ಶಿವರಾಂ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು

ಕಾರ್ಯಕ್ರಮಕ್ಕೆ ಬಂದಿರುವ ಮಹಿಳೆಯರಿಗೆ ಅರಿಶಿನ ಕುಂಕುಮ, ಸೀರೆ, ಬಳೆ ಜೊತೆಗೆ ವಿಶೇಷ ಉಡುಗೊರೆ ನೀಡುವ ಮೂಲಕ ವಿಶ್ವ ತಾಯಂದಿರ ದಿನಾಚರಣೆ ಆಚರಣೆ ಮಾಡಲಾಯಿತು. ಟಿ.ದಾಸರಹಳ್ಳಿಯ ಕ್ಷೇತ್ರದ ಎಲ್ಲಾ ಬಡಾವಣೆಯ ತಾಯಿಯಂದಿರು ಕಾರ್ಯಕ್ರಮದಲ್ಲಿ ನೆರೆದಿದ್ದರು.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ