Breaking News

ಅರ್ಕಾವತಿ ರೀಡೂ ಬಯಲಿಗೆ ಬಂದರೆ ಸಿದ್ದರಾಮಯ್ಯ ಜೈಲಿಗೆ: ನಳಿನ್‌ ಕುಮಾರ್‌ ಕಟೀಲ್

Spread the love

ಬೆಂಗಳೂರು: ‘ಅರ್ಕಾವತಿ ಡಿನೋಟಿಫಿಕೇಷನ್‌ ಮತ್ತು ರೀಡೂ ಕುರಿತ ಕೆಂಪಣ್ಣ ಆಯೋಗದ ವರದಿ ಹೊರಬಂದರೆ ಸಿದ್ದರಾಮಯ್ಯ ಶಾಶ್ವತವಾಗಿ ಜೈಲಿನಲ್ಲಿ ಇರಬೇಕಾಗುತ್ತದೆ. ಅದನ್ನು ಹೊರ ಹಾಕುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಅದನ್ನು ಹೊರ ಹಾಕುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಯುವ ಮೋರ್ಚಾ ಕಾರ್ಯಕಾರಿಣಿ ಸಭೆಯನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಷ್ಟು ಭ್ರಷ್ಟಾಚಾರಿ ಈ ರಾಜ್ಯದಲ್ಲಿ ಬೇರೆ ಯಾರೂ ಇರಲಿಲ್ಲ ಎಂದು ಕಿಡಿಕಾರಿದರು.

ಇವರ ಅವಧಿಯಲ್ಲಿ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷ್‌ ಮತ್ತು ರೀಡೂ ಅಲ್ಲದೆ, ಹಾಸಿಗೆ ಹಗರಣ, ದಿಂಬಿನ ಹಗರಣ, ಹಾಸ್ಟೆಲ್‌ ಹಗರಣ, ಪಿಡಬ್ಲ್ಯುಡಿ ಹಗರಣ, ಬೋರ್‌ವೆಲ್‌ ಹಗರಣ, ಮೆಡಿಕಲ್‌ ಹಗರಣ ಹೀಗೆ ಹಗರಣಗಳ ಸರಮಾಲೆಯೇ ನಡೆದಿತ್ತು. ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಆಗಿ ಏಳು ತಿಂಗಳ ಬಳಿಕ ಮತ್ತು ನ್ಯಾಯಾಲಯ ಸೂಚಿಸಿದ್ದರಿಂದ ಸಚಿವ ಜಾರ್ಜ್‌ ರಾಜೀನಾಮೆ ಕೊಟ್ಟರು. ಹಗರಣಗಳ ತನಿಖೆಗೆ ಸಿದ್ದರಾಮಯ್ಯ ಸರ್ಕಾರ ಮುಂದಾಗಲಿಲ್ಲ ಎಂದು ನಳಿನ್‌ ದೂರಿದರು.

ಪಿಎಸ್‌ಐ ಪರೀಕ್ಷೆ ಅಕ್ರಮದ ಬಯಲಿಗೆ ಬರುತ್ತಿದ್ದಂತೆ ಸಿಐಡಿ ತನಿಖೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದರು. ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ. ಈ ವಿಚಾರವಾಗಿ ಕಾಂಗ್ರೆಸ್‌ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.

‘ಈ ಹಿಂದೆ ಸಿದ್ದರಾಮಯ್ಯ ಡ್ರಗ್ಸ್‌ ಹಣದಲ್ಲೇ ಸರ್ಕಾರ ನಡೆಸಿದ್ದರು. ನಮ್ಮ ಸರ್ಕಾರ ಬಂದ ಬಳಿಕ ಡ್ರಗ್ಸ್‌ ಮುಕ್ತ ರಾಜ್ಯವನ್ನಾಗಿ ಮಾಡಿ ಸರ್ಕಾರವನ್ನು ಮುನ್ನಡೆಸುತ್ತಿದ್ದೇವೆ’ ಎಂದು ಅವರು ಹೇಳಿದರು.

ಶಾಸಕ ಪ್ರಿಯಾಂಕ್‌ ಖರ್ಗೆ ಕುಟುಂಬ ಸಾವಿರಾರು ಕೋಟಿಯ ಧನಿಕರಾದುದು ಹೇಗೆ? ಅಷ್ಟು ಹಣ ಎಲ್ಲಿಂದ ಬಂದಿತು ಎಂಬುದನ್ನು ಹೇಳಬೇಕು. ಪ್ರಿಯಾಂಕ್‌ ಪದೇ ಪದೇ ಸುಳ್ಳುಗಳನ್ನು ಹೇಳುವುದನ್ನು ಬಿಟ್ಟು ಅದಕ್ಕೆ ದಾಖಲೆಗಳನ್ನು ಕೊಡಬೇಕು. ಪಿಎಸ್‌ಐ ಪರೀಕ್ಷೆ ಹಗರಣದ ತನಿಖೆ ಪೂರ್ಣಗೊಂಡಾಗ ಕಾಂಗ್ರೆಸ್‌ನ ಶೇ 80 ರಷ್ಟು ಜನ ಜೈಲಿನಲ್ಲಿರುತ್ತಾರೆ ಎಂದು ನಳಿನ್‌ ತಿಳಿಸಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ