ಬೆಂಗಳೂರು: ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಉದ್ಘಾಟನೆಗೊಂಡ ಎರಡೇ ತಿಂಗಳಲ್ಲಿ ಅಟಲ್ ಬಿಹಾರಿ ವಾಹಪೇಯಿ ಕ್ರೀಡಾಂಗಣದ ಗ್ಯಾಲರಿ ನೆಲಕ್ಕುರುಳಿದೆ. ನಾಲ್ಕು ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಕ್ರೀಡಾಂಗಣವನ್ನು ಮಾರ್ಚ್ 1 ರಂದು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದ್ದರು.
ನಿನ್ನೆ ಸಂಜೆ ಬೀಸಿದ ಬಿರುಗಾಳಿ ಮಳೆಗೆ ಗ್ಯಾಲರಿ ಧರೆಗುರುಳಿದೆ. ಒಂದು ಗ್ಯಾಲರಿ ಮರಗಳಲ್ಲಿ ಸಿಲುಕ್ಕಿದ್ದರೇ ಮತ್ತೊಂದು ಗ್ಯಾಲರಿ ಸೀದಾ ಧರೆಗುರುಳಿದೆ. ಗ್ಯಾಲರಿ ಹಿಂಭಾಗದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೂ ಕಬ್ಬಿಣದ ಸರಳುಗಳು ಬಿದ್ದಿವೆ. ಗ್ರಾನೈಟ್ ಸಮೇತ ಸ್ಲ್ಯಾಬ್ ಗಳು ಕಿತ್ತುಹೋಗಿವೆ. ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಒಟ್ಟು 50 ಕೋಟಿರೂ ಗಳನ್ನ ಬಿಬಿಎಂಪಿ ಮೀಸಲಿಟ್ಟಿತ್ತು.