ಚಿಕ್ಕಮಗಳೂರು: ಜೆಡಿಎಸ್ ಅಧಿಕಾರಕ್ಕೆ ತಂದು ಕೊನೆ ಉಸಿರು ಬಿಡಬೇಕೆಂಬುದೇ ನನ್ನ ಹಠ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.
ದೇವೇಗೌಡ ಹೇಳಿದ್ದಾರೆ. ದೇವೇಗೌಡರಿಗೆ 90 ವರ್ಷ ವಯಸ್ಸಾಗಿದೆ ಎಂದು ಯಾರೋ ಹೇಳಿದ್ರು. ಆದ್ರೆ ನನಗೆ ಇನ್ನೂ 90 ಮುಟ್ಟೇ ಇಲ್ಲ. ನನ್ನ ಜೀವನದ ಕೊನೆ ಆಸೆ ಏನು ಗೊತ್ತಾ? ಒಂದು ಪ್ರಾದೇಶಿಕ ಪಕ್ಷವನ್ನ ಉಳಿಸಿ, ಅಧಿಕಾರಕ್ಕೆ ತರಬೇಕು. ಅಧಿಕಾರಕ್ಕೆ ತಂದು ಕೊನೆ ಉಸಿರು ಬೀಡಬೇಕೆಂಬುದೇ ನನ್ನ ಹಠ ಎಂದು ಹೆಚ್.ಡಿ. ದೇವೇಗೌಡ ಭಾವುಕರಾಗಿದ್ದಾರೆ.
ಜೆಡಿಎಸ್ ಪಕ್ಷವನ್ನ ಅಧಿಕಾರಕ್ಕೆ ತಂದು ಕೊನೆ ಉಸಿರು ಬಿಡಬೇಕೆಂಬುದೇ ನನ್ನ ಹಠ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮತ್ತೊಮ್ಮೆ ಪಕ್ಷವನ್ನ ಅಧಿಕಾರಕ್ಕೆ ತರುವ ಇಂಗಿತವನ್ನ ವ್ಯಕ್ತಪಡಿಸಿದ್ದಾರೆ. ಅವರಿಂದು ಪಕ್ಷದ ಜನತಾ ಜಲಧಾರೆ ಹಾಗೂ ಪಕ್ಷದ ಕಾರ್ಯಕರ್ತರ ಸಭೆಗೆ ಆಗಮಿಸಿದ್ದರು. ನಗರದ ಎ.ಐ.ಟಿ. ವೃತ್ತದ ಬಳಿಯ ಒಕ್ಕಲಿಗರ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಮಾತನಾಡಿದ ದೇವೇಗೌಡರು, ಯಾರೋ ನನಗೆ 90 ವರ್ಷವಾಗಿದೆ ಎಂದು ಹೇಳಿದರು. ನನಗೆ 90 ಇನ್ನೂ ಮುಟ್ಟೇ ಇಲ್ಲ ಎಂದು ತನ್ನ ವಯಸ್ಸಿನ ಬಗ್ಗೆ ಕಾಮೆಂಟ್ ಮಾಡಿದವರಿಗೆ ಟಾಂಗ್ ಕೊಟ್ಟಿದ್ದಾರೆ. ಒಂದು ಪ್ರಾದೇಶಿಕ ಪಕ್ಷವನ್ನ ಉಳಿಸಿ ಅಧಿಕಾರಕ್ಕೆ ತರಬೇಕು. ಅದೇ ನನ್ನ ಕೊನೆ ಆಸೆ. ಪ್ರಾದೇಶಿಕ ಪಕ್ಷವನ್ನ ಅಧಿಕಾರಕ್ಕೆ ತಂದು ನನ್ನ ಕೊನೆ ಉಸಿರು ಬಿಡಬೇಕೆಂಬುದು ನನ್ನ ಹಠ ಎಂದು ಪಕ್ಷವನ್ನ ಮತ್ತೊಮ್ಮೆ ಅಧಿಕಾರಕ್ಕೆ ತರಲು ಪಣ ತೊಟ್ಟಿರುವುದಾಗಿ ಹೇಳಿದರು.