Breaking News
Home / Uncategorized / ಅನ್ಯ ರಾಜ್ಯಗಳಿಂದ ಬರುವವರಿಗೆ 14 ದಿನ ಕಡ್ಡಾಯವಾಗಿ ಹೋಮ್ ಕ್ವಾರಂಟೈನ್ ಜಾರಿ ಮಾಡಿದೆ.

ಅನ್ಯ ರಾಜ್ಯಗಳಿಂದ ಬರುವವರಿಗೆ 14 ದಿನ ಕಡ್ಡಾಯವಾಗಿ ಹೋಮ್ ಕ್ವಾರಂಟೈನ್ ಜಾರಿ ಮಾಡಿದೆ.

Spread the love

ಬೆಂಗಳೂರು,ಜು.6-ರಾಜ್ಯದಲ್ಲಿ ಕೊರೊನಾ ಸೊಂಕಿನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊನೆಗೂ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಅನ್ಯ ರಾಜ್ಯಗಳಿಂದ ಬರುವವರಿಗೆ 14 ದಿನ ಕಡ್ಡಾಯವಾಗಿ ಹೋಮ್ ಕ್ವಾರಂಟೈನ್ ಜಾರಿ ಮಾಡಿದೆ.

ಮಹಾರಾಷ್ಟ್ರ ಸೇರಿದಂತೆ ಯಾವುದೇ ರಾಜ್ಯಗಳಿಂದ ಇನ್ನು ಮುಂದೆ ಕರ್ನಾಟಕಕ್ಕೆ ಆಗಮಿಸುವ ಪ್ರತಿಯೊಬ್ಬ ವ್ಯಕ್ತಿಯು ಕಡ್ಡಾಯವಾಗಿ 14 ದಿನ ಹೋಂ ಕ್ವಾರಂಟೈನ್‍ಗೆ ಒಳಗಾಗಬೇಕೆಂದು ಕಂದಾಯ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಈ ಹಿಂದೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಮಂಜುನಾಥ್ ಪ್ರಸಾದ್ ಅವರು ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, 14 ದಿನ ಕ್ವಾರಂಟೈನ್‍ಗೆ ಒಳಗಾಗುವರು ಯಾವ ಯಾವ ನಿಯಮಗಳನ್ನು ಪಾಲನೆ ಮಾಡಬೇಕೆಂಬುದನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಲಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಸೋಂಕು ಪ್ರಕರಣಗಳು ಹೆಚ್ಚಾಗಿರುವ ಮಹಾರಾಷ್ಟ್ರ, ದೆಹಲಿ, ಗುಜರಾತ್, ತಮಿಳುನಾಡು ರಾಜ್ಯಗಳಿಂದ ಬರುವವರಿಗೆ ಮಾತ್ರ ಏಳು ದಿನ ಇನ್‍ಸ್ಟ್ಯೂಟನಲ್ ಕ್ವಾರಂಟೈನ್ ಕಡ್ಡಾಯ ಮಾಡಲಾಗಿತ್ತು.

ಆದರೆ ರಾಜ್ಯದಲ್ಲಿ ಸೋಂಕು ಪ್ರಕರಣಗಳು ಹೆಚ್ಚಾದ ಪರಿಣಾಮ ಕೆಲವು ನಿಯಮಗಳನ್ನು ಸಡಿ

ಆದರೆ ರಾಜ್ಯದಲ್ಲಿ ಸೋಂಕು ಪ್ರಕರಣಗಳು ಹೆಚ್ಚಾದ ಪರಿಣಾಮ ಕೆಲವು ನಿಯಮಗಳನ್ನು ಸಡಿಲಿಕೆ ಮಾಡಲಾಗಿತ್ತು. ಮಹಾರಾಷ್ಟ್ರದಿಂದ ಬಂದವರಿಗೆ ಮಾತ್ರ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಹಾಗೂ 14 ದಿನ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿತ್ತು.

ಆದರೆ ರಾಜ್ಯದಲ್ಲಿ ಯಾವಾಗ ಲಾಕ್‍ಡೌನ್‍ಗೆ ವಿಧಿಸಲಾಗಿದ್ದ ಬಹುತೇಕ ನಿಯಮಗಳನ್ನು ಸಡಿಲಗೊಳಿಸಿದ ಬಳಿಕ ಸರ್ಕಾರದ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬುವಂತಾಗಿತ್ತು. ಅನ್ಯ ರಾಜ್ಯಗಳಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಹಾಗೂ ಹೋಂ ಕ್ವಾರಂಟೈನ್ ಎಷ್ಟು ದಿನ ಕಡ್ಡಾಯ ಮಾಡಬೇಕು ಎಂಬುದರ ಬಗ್ಗೆಯೇ ಸರ್ಕಾರದಲ್ಲಿ ಗೊಂದಲ ಉಂಟಾಗಿತ್ತು.

ಇದೀಗ ಕಳೆದ 15 ದಿನಗಳಿಂದ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಪರಿಣಾಮ ಸರ್ಕಾರ ಪುನಃ ನಿಯಮಗಳನ್ನು ಬಿಗಿಗೊಳಿಸುತ್ತಿದೆ. ಇದರ ಮೊದಲ ಹಂತವಾಗಿಯೇ ಈ ತಿಂಗಳ ಅಂತ್ಯದವರೆಗೂ ಪ್ರತಿ ಭಾನುವಾರ ಸಂಪೂರ್ಣ ಲಾಕ್‍ಡೌನ್ ಜಾರಿ ಮಾಡಲಾಗಿದೆ.


Spread the love

About Laxminews 24x7

Check Also

ರೈತರಿಗೆ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡುವಂತೆ ಒತ್ತಾಯ

Spread the love ಬೆಳಗಾವಿ: ರಾಜ್ಯ ಸರ್ಕಾರ ರೈತರಿಗೆ ಶೀಘ್ರವೇ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ