Breaking News

ಖಾಸಬಾಗ್, ವಡಗಾವಿ ಭಾಗದಲ್ಲಿ ಬಾಂಡ್ ಮೇಲೆ ಖರೀದಿಸಿದ ನಿವೇಶನ ಅಥವಾ ಮನೆಗಳಿಗೆ ಹಿಂದಿನಂತೆ ಉತಾರ ನೀಡುವಂತೆ ಆಗ್ರಹಿಸಿ ನೇಕಾರ ಕಾರ್ಮಿಕರ ಒತ್ತಾಯ

Spread the love

ಬೆಳಗಾವಿ: ಇಲ್ಲಿನ ಖಾಸಬಾಗ್, ವಡಗಾವಿ ಭಾಗದಲ್ಲಿ ಬಾಂಡ್ ಮೇಲೆ ಖರೀದಿಸಿದ ನಿವೇಶನ ಅಥವಾ ಮನೆಗಳಿಗೆ ಹಿಂದಿನಂತೆ ಉತಾರ ನೀಡುವಂತೆ ಆಗ್ರಹಿಸಿ ನೇಕಾರ ಕಾರ್ಮಿಕರ ಬಳಗದವರು ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

 

‘ನಗರದ ಬಹುತೇಕ ಪ್ರದೇಶಗಳಲ್ಲಿ ಬಾಂಡ್ ಮೇಲೆ ಖರೀದಿಸಿದ ನಿವೇಶನಗಳಲ್ಲಿ ಮನೆ ನಿರ್ಮಿಸಲಾಗಿದೆ. ಅವುಗಳಿಗೆ 30-40 ವರ್ಷಗಳಿಂದಲೂ ಪಾಲಿಕೆಯಿಂದ ಕರ ಅಕರಿಸಲಾಗುತ್ತಿದೆ. ಅದಕ್ಕಾಗಿಯೇ ಹಿಂದೆ ಪಾಲಿಕೆಯಿಂದ ಉತಾರ ಕೊಡುವ ವ್ಯವಸ್ಥೆಯೂ ಇತ್ತು. ಈ ಉತಾರದಿಂದ ಬಡವರು, ನೇಕಾರ ಕಾರ್ಮಿಕರಿಗೆ ಸೊಸೈಟಿಗಳಲ್ಲಿ ಸಾಲ ಪಡೆಯುತ್ತಿದ್ದರು; ಇತರ ಹಲವು ಸರ್ಕಾರಿ ಸೌಲಭ್ಯಗಳು ಸಿಗುತ್ತಿದ್ದವು. ಆದರೆ, 4 ವರ್ಷಗಳಿಂದ ದಿಢೀರನೆ ಉತಾರ ನೀಡುವುದನ್ನು ನಿಲ್ಲಿಸಲಾಗಿದೆ’ ಎಂದು ತಿಳಿಸಿದರು.

‘ಇದರಿಂದ ನೇಕಾರ ಕಾರ್ಮಿಕರು, ಬಡ ಕೂಲಿಕಾರ ಕುಟುಂಬಗಳಿಗೆ ಅನಾನುಕೂಲವಾಗಿದೆ. ನೇಕಾರ ಕಾರ್ಮಿಕರಿಗೆ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಲ್ಲಿ ಉತಾರಗಳಿಲ್ಲದೆ ಸಾಲ ಸಿಗದಂತಾಗಿದೆ. ಇದರಿಂದಾಗಿ ಅನಿವಾರ್ಯವಾಗಿ ಹೆಚ್ಚಿನ ಬಡ್ಡಿ ದರಕ್ಕೆ ಕೈ ಸಾಲ ಮಾಡಬೇಕಾಗಿದೆ. ಇದರಿಂದ ಸಾಲದ ಹೊರೆ ಹೆಚ್ಚಾಗಿ ನೇಕಾರರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ’ ಎಂದು ಹೇಳಿದರು.


Spread the love

About Laxminews 24x7

Check Also

ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,.

Spread the love ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,. ಚಿಕ್ಕೋಡಿ: ಆಡಳಿತಾತ್ಮಕ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಡಿಸೆಂಬ‌ರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ