Breaking News

ಶಿರಸಿ ಉತ್ಸವದಲ್ಲಿ ಕೆಂಡ ಹಾಯ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರ ಗ್ರಾಮದ ವೀರಭದ್ರೇಶ್ವರ ಮತ್ತು ಚೌಡೇಶ್ವರಿ ದೇವಸ್ಥಾನದಲ್ಲಿ ಇಂದು ನಡೆದ ಗುಗ್ಗಳ ಉತ್ಸವದ ವೇಳೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಕೆಂಡ ಹಾಯ್ದರು.

ದೇವಸ್ಥಾನದಲ್ಲಿ ಪ್ರತಿ ವರ್ಷ ನಡೆಯುವ ಉತ್ಸವದ ವೇಳೆ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಹರಕೆ ಕಟ್ಟಿಕೊಂಡವರು, ಈಡೇರಿದ ಮೇಲೆ ಕೆಂಡ ಹಾಯುವ ಪದ್ಧತಿ ನಡೆಸಿಕೊಂಡು ಬರಲಾಗುತ್ತಿದೆ. ಇಲ್ಲಿ ಪ್ರತಿ ವರ್ಷ ಇಷ್ಟಾರ್ಥ ಈಡೇರಿಕೆಗೆ ಪ್ರಾರ್ಥಿಸಿ ಭಕ್ತರು ಈ ಪದ್ಧತಿ ಅನುಸರಿಸುತ್ತಿದ್ದಾರೆ. ಆದರೆ ದೇವರ ದರ್ಶನಕ್ಕೆ ತೆರಳಿದ್ದ ಶಿವರಾಮ್ ಹೆಬ್ಬಾರ್ ಭಕ್ತರ ಜೊತೆಗೆ ತಾವೂ ಕೂಡ ಕೆಂಡ ಹಾಯ್ದಿದ್ದಾರೆ.

ಶಿವರಾಮ್ ಹೆಬ್ಬಾರ್ ಕೂಡ ಹಿಂದೆ ಶ್ರೀ ವೀರಭದ್ರ ದೇವರಲ್ಲಿ ಹರಕೆ ಕಟ್ಟಿಕೊಂಡಿದ್ದು, ಅದು ನೆರವೇರಿರುವುದರಿಂದ ಅವರು ಸಹ ಕೆಂಡಹಾಯ್ದಿದ್ದಾರೆ ಎಂದು ಅವರ ಆಪ್ತ ಮೂಲಗಳು ಹೇಳಿವೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ