ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇದೇ ತಿಂಗಳ ಮೂರನೇ ವಾರದಲ್ಲಿ ಪ್ರಕಟ ವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದಿದೆ.
ಫಲಿತಾಂಶದ ತಯಾರಿಯ ಕೊನೆಯ ಘಟ್ಟದಲ್ಲಿ ಕೆಲಸ ನಡೆಯುತ್ತಿದೆ. ಮೂರನೇ ವಾರ ಫಲಿತಾಂಶ ಲಭ್ಯವಾಗಲಿದೆ ಎಂದು ತಿಳಿಸಿದರು.