ಶಿವಮೊಗ್ಗ: ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಪ್ರಿಯಾಂಕ್ ಖರ್ಗೆ ಅವರಿಗೆ ಮೂರು ಬಾರಿ ನೋಟಿಸ್ ನೀಡಲಾಗಿದೆ. ಹೀಗಿದ್ದರೂ ಅವರು ಮಾಹಿತಿ ನೀಡುತ್ತಿಲ್ಲ ಎಂದು ಹೇಳಿದ್ದಾರೆ.
ಮಾಹಿತಿ ಕೊಡದೆ ಮಾಧ್ಯಮಗಳ ಬಂದು ಮುಂದೆ ಪ್ರಿಯಾಂಕ್ ಖರ್ಗೆ ಬೂಕಾಳಿ ಬಿಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಎಪಿಪಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಅದರ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ. ಯಾರೆಲ್ಲಾ ಹಗರಣದಲ್ಲಿ ಇದ್ದಾರೆ ಎನ್ನುವುದು ಗೊತ್ತಿದೆ. ಪ್ರಕರಣದ ಕಿಂಗ್ ಪಿನ್ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಬಂಟನಾಗಿದ್ದಾನೆ. ಈಗಾಗಲೇ ಆತನನ್ನು ಬಂಧಿಸಲಾಗಿದೆ ಎಂದಿದ್ದಾರೆ.
ಪರೀಕ್ಷೆ ಅಕ್ರಮದಲ್ಲಿ ಅನೇಕ ಅಧಿಕಾರಿಗಳು ಭಾಗಿಯಾಗಿದ್ದು, ಅಂತಹ ಅಧಿಕಾರಿಗಳನ್ನು ಬಂಧಿಸಲಾಗುತ್ತಿದೆ. ಶೀಘ್ರದಲ್ಲಿಯೇ ತನಿಖೆ ಮುಗಿಸಿ ಮರು ಪರೀಕ್ಷೆ ನಡೆಸಲಾಗುವುದು. ಮತ್ತೆ ಈ ರೀತಿ ಆಗದಂತೆ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸುತ್ತೇವೆ ಎಂದು ಹೇಳಿದ್ದಾರೆ