Breaking News

545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ವಿಚಾರ; ಕಾಂಗ್ರೆಸ್ ಮಾಜಿ ಸಚಿವನ ಆಪ್ತ ಶರತ್ ಅರೆಸ್ಟ್!

Spread the love

ಮಂಡ್ಯ: 545ಪಿಎಸ್‌ಐಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮದ ಬಗ್ಗೆ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ವಿಚಾರಣೆಯಲ್ಲಿ ಕಲಬುರಗಿ ಜೊತೆ ಬೇರೆ ಬೇರೆ ಜಿಲ್ಲೆಗಳಲ್ಲೂ ಅಕ್ರಮ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇನ್ನು ಈ ಅಕ್ರಮಕ್ಕೆ ಸಂಬಂಧಿಸಿ ಮಂಡ್ಯದ ಮಾಜಿ ಸಚಿವರ ಆಪ್ತನ್ನು ಬಂಧಿಸಲಾಗಿದೆ. ಶರತ್ ರಾಮಣ್ಣ ಎಂಬಾತನನ್ನು ಸಿಐಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶರತ್ ಮಂಡ್ಯ ಜಿಲ್ಲೆಯ ನಾಗಮಂಗಲದವನು. ಈತ ಮಾಜಿ ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಸಚಿವ ಎನ್ ಚಲುವರಾಯಸ್ವಾಮಿ (N Narayanaswamy) ಅವರ ಆಪ್ತನಾಗಿದ್ದಾನೆ.

ಶರತ್ ಶ್ರವಣಬೆಳಗೊಳದ ಪಿಎಸ್‌ಐ ಅಭ್ಯರ್ಥಿ ಪರವಾಗಿ ಪರೀಕ್ಷೆಯಲ್ಲಿ ಅಕ್ರಮವೆಸಗಿರುವ ಆರೋಪ ಕೇಳಿಬಂದಿದೆ. ಸಿಐಡಿ ಅಧಿಕಾರಿಗಳು ಮೊನ್ನೆ ರಾತ್ರಿ ಶರತ್ನ ವಶಕ್ಕೆ ಪಡೆದಿದ್ದಾರೆ. ದಿನದಿಂದ ದಿನಕ್ಕೆ ಆರೋಪಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಿಐಡಿ ಅಧಿಕಾರಿಗಳು ವಿಚಾರಣೆಯನ್ನು ಚುರುಕುಗೊಳಿಸಿದ್ದಾರೆ.

ಅತ್ತ ಪಿಎಸ್‌ಐ ಅಕ್ರಮದ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಇತ್ತ ಅದೇ ಪಕ್ಷದ ಯುವ ನಾಯಕನನ್ನು ಸಿಐಡಿ ವಶಕ್ಕೆ ಪಡೆಯಲಾಗಿದೆ.


Spread the love

About Laxminews 24x7

Check Also

ಸರ್ಕಾರಿ ವೈದ್ಯರು, ನರ್ಸ್​ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ

Spread the loveಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್​ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ