ಹೈಕಮಾಂಡ್ ಮಟ್ಟದಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಳ್ಳಬೇಕಾದರೆ ಕಾಂಗ್ರೆಸ್ಸಿನಲ್ಲಿ ಗಾಂಧಿ/ ನೆಹರೂ ಕುಟುಂಬದ ಜೊತೆಗೆ ಉತ್ತಮ ನಂಟಿರಬೇಕು. ಇದು ಶತಮಾನಗಳ ಇತಿಹಾಸವಿರುವ ಕಾಂಗ್ರೆಸ್‌ನಲ್ಲಿರುವ ಅಲಿಖಿತ ಕಾನೂನು.
ಇದೇ ವಾರಾಂತ್ಯದಲ್ಲಿ ರಾಜಸ್ಥಾನದ ಉದಯಪುರದಲ್ಲಿ ಕಾಂಗ್ರೆಸ್ ಚಿಂತನಾ ಸಭೆ ಆಯೋಜಿಸಲಾಗಿದೆ.
ಮುಂಬರುವ ಚುನಾವಣೆಗಳು, ರಾಷ್ಟ್ರಾಧ್ಯಕ್ಷರ ನೇಮಕ ಮತ್ತು ಪಕ್ಷದ ಮುಂದಿನ ಕಾರ್ಯಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ ಈ ಸಭೆ ಮಹತ್ವವನ್ನು ಪಡೆದುಕೊಂಡಿದೆ.
ರಾಜ್ಯದಿಂದಲೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅದಕ್ಕೂ ಮುನ್ನ, ಮಹತ್ವದ ಯೋಜನೆಯೊಂದನ್ನು ಡಿಕೆಶಿ ಹೊತ್ತುಕೊಂಡು ಹೋಗಲಿದ್ದಾರೆ ಎಂದು ಸುದ್ದಿಯಾಗುತ್ತಿದೆ.