Breaking News

ತಡರಾತ್ರಿ ಬೈಕ್​ನಲ್ಲಿ ಮಹಿಳೆ ಶವ ಸಾಗಿಸುವಾಗ ರಾಮನಗರ ಡಿಸಿ ಕಚೇರಿ ಎದುರೇ ಅಪಘಾತ!

Spread the love

ರಾಮನಗರ: ಅವರವರ ಕರ್ಮಕ್ಕೆ ತಕ್ಕ ಪ್ರತಿಫಲವನ್ನ ಅವರೇ ಅನುಭವಿಸಬೇಕು. ಕೆಲವರಿಗೆ ಕರ್ಮಫಲ ತಡವಾಗಿ ಸಿಗಬಹುದು, ಇನ್ನು ಕೆಲವರಿಗೆ ತಕ್ಷಣವೇ ಕರ್ಮಫಲ ದೊರೆಯುತ್ತದೆ ಎಂಬ ಮಾತು ಅಕ್ಷರಶಃ ಈ ಪ್ರಕರಣಕ್ಕೆ ಸಾಕ್ಷಿ. ಮಹಿಳೆಯೊಬ್ಬರನ್ನ ಕೊಲೆ ಮಾಡಿ ಶವವನ್ನು ತಡರಾತ್ರಿ ಬೈಕ್​ನಲ್ಲಿ ಶವ ಸಾಗಿಸುತ್ತಿದ್ದ ವೇಳೆ ಜಿಲ್ಲಾಧಿಕಾರಿ ಕಚೇರಿ ಎದುರೇ ಆ ಬೈಕ್​ ಅಪಘಾತಕ್ಕೀಡಾಗಿದ್ದು, ಕೊಲೆ ರಹಸ್ಯ ಬಯಲಾಗಿದೆ!

 

ಇಂತಹ ಭಯಾನಕ ಘಟನೆ ರಾಮನಗರದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಶ್ವೇತಾ ಕೊಲೆಯಾದಾಕೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಿಂದ ಶ್ವೇತಾಳ ಶವವನ್ನ ಬೈಕ್​ನಲ್ಲಿ ಇಟ್ಟುಕೊಂಡು ಪುರುಷರಿಬ್ಬರು ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಪ್ರಯಾಣಿಸುತ್ತಾ ಬೇರೆಡೆಗೆ ಸಾಗಿಸುತ್ತಿದ್ದರು. ರಾಮನಗರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೈಕ್​ ಸ್ಕಿಡ್​ ಆಗಿದ್ದು, ಅಪಘಾತ ಸಂಭವಿಸಿದೆ.

ಅಪಘಾತ ಸ್ಥಳಕ್ಕೆ ಬಂದ ನಗರ ಪೊಲೀಸರು ಬಂದಾಗ ಮಹಿಳೆ ಮೃತಪಟ್ಟಿರುವುದು ಗೊತ್ತಾಗಿದೆ. ಮೇಲ್ನೋಟಕ್ಕೆ ಅಪಘಾತದಕ್ಕೆ ಆಕೆ ಮೃತಪಟ್ಟಂತೆ ಕಂಡಿದೆ. ಮಹಿಳೆಯ ಶವವನ್ನ ತಪಾಸಣೆ ಮಾಡಿದ ಜಿಲ್ಲಾ ಆಸ್ಪತ್ರೆ ವೈದ್ಯರು, ಮಹಿಳೆ ಮೃತಪಟ್ಟು ಹಲವು ಗಂಟೆ ಕಳೆದಿದೆ ಎಂದಿದ್ದಾರೆ. ಅನುಮಾನಗೊಂಡ ಪೊಲೀಸರು, ಬೈಕ್​ ಸವಾರರಾದ ನಾಗರಾಜು ಮತ್ತು ವಿನೋದ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ