ಬೆಂಗಳೂರು : ನಾನು 25 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡದೇ ಇದ್ದಿದ್ದರೆ ಎಂಟು ಸಾವಿರ ಕೋಟಿ ರೂ. ಕಮಿಷನ್ ಸಿಗುತ್ತಿತ್ತು. ಬಿಜೆಪಿ, ಕಾಂಗ್ರೆಸ್ಗಿಂತ ಚೆನ್ನಾಗಿ ಚುನಾವಣೆ ಮಾಡಬಹುದಿತ್ತು ಎಂದು 40% ಕಮಿಷನ್ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
ನಗರದ ಮಹಾಲಕ್ಷ್ಮೀ ಲೇಔಟ್ನಲ್ಲಿ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡದೇ ಇದ್ದಿದ್ದರೆ ಎಂಟು ಸಾವಿರ ಕೋಟಿ ರೂ. ಕಮಿಷನ್ ಸಿಗುತ್ತಿತ್ತು. ನಾನು ಬೆಂಗಳೂರಿನಲ್ಲಿ ಚರಂಡಿ ಕ್ಲೀನ್ ಮಾಡುವುದಕ್ಕೆ, ವೈಟ್ ಟ್ಯಾಪಿಂಗ್ ಮಾಡುವುದಕ್ಕೆ ಅದೇ ಹಣವನ್ನು ಕೊಟ್ಟು ಕಮಿಷನ್ ಪಡೆದಿದ್ದರೆ ಬಿಜೆಪಿ, ಕಾಂಗ್ರೆಸ್ಗಿಂತ ಚೆನ್ನಾಗಿ ಚುನಾವಣೆ ಮಾಡಬಹುದಿತ್ತು. ನಮ್ಮ ಶಾಸಕರಿಗೆ ಆ ಹಣವನ್ನು ಹಂಚಿ, ಕೊಳ್ಳೆ ಹೊಡೆಯಬಹುದಿತ್ತು. ಈಗ ಬಿಜೆಪಿಯವರು 40% ಕಮಿಷನ್ ಹೊಡೆಯುತ್ತಿದ್ದಾರೆ, ಅವರಿಗೆ ನಾಚಿಕೆ ಆಗಬೇಕು ಎಂದು ಹೇಳಿದರು.
ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕೆರೆ-ಕೋಡಿಗಳನ್ನು ನುಂಗಿದವರನ್ನು ಖಾಲಿ ಮಾಡಿಸುತ್ತೇವೆ ಹಾಗೂ ಆ ಕೆರೆಗಳಿಗೆ ಪೂರ್ವ ವೈಭವ ತಂದು ನದಿ ಜಲವನ್ನು ತುಂಬಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.