ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಆರೋಪಿಗಳಿಗೆ ಶಿಕ್ಷೆ ಕೊಡಿಸಬೇಕು ಎಂದು ಎಐಡಿಎಸ್‌ಒ ಸಂಘಟನೆ ಆಗ್ರಹಿಸಿದೆ.
ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು, ಆರೋಪಿಗಳನ್ನು ಪತ್ತೆ ಹಚ್ಚಿ ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಐಡಿಎಸ್‌ಒ ಮುಖಂಡ ಕಲ್ಯಾಣಕುಮಾರ್, ಇತ್ತೀಚಿಗೆ ಭೂಗೋಳಶಾಸ್ತ್ರ ವಿಷಯದ 18 ಪ್ರಶ್ನೆಗಳು ಸೋರಿಕೆಯಾಗಿದ್ದವು.
ಅದರ ಬೆನ್ನಲ್ಲೇ ಇದೀಗ ಇಂಗ್ಲೀಷ್ ಮತ್ತು ಸಮಾಜಶಾಸ್ತ್ರ ವಿಷಯದ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ ಎಂಬ ಅನುಮಾನ ದಟ್ಟವಾಗಿದೆ ಎಂದರು.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮದಲ್ಲಿ ಭಾಗಿಯಾಗಿದ್ದಾರೆನ್ನಲಾದ ಕವಿವಿ ಮೌಲ್ಯಮಾಪನ ವಿಭಾಗದ ಕುಲಸಚಿವರನ್ನು ಈಗಾಗಲೇ ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ. ಎಐಡಿಎಸ್‌ಒ ಮುಖಂಡರಾದ ವಿನಯ್‌ಚಂದ್ರ, ಕಿಶೋರ್ ಸೇರಿದಂತೆ ಮತ್ತಿತರರು ಹಾಜರಿದ್ದರು