Breaking News

ಗೋವಾದಲ್ಲಿ ರಷ್ಯಾ ಮೂಲದ ಬಾಲಕಿ ಮೇಲೆ ಅತ್ಯಾಚಾರ: ಗದಗದಲ್ಲಿ ಆರೋಪಿ ಸೆರೆ

Spread the love

ಪಣಜಿ: ಉತ್ತರ ಗೋವಾದ ಅರಂಬೋಲ್‌ನಲ್ಲಿರುವ ರೆಸಾರ್ಟ್‌ನಲ್ಲಿ ರಷ್ಯಾ ಮೂಲದ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕರ್ನಾಟಕದ ವ್ಯಕ್ತಿಯೊಬ್ಬನನ್ನು ಗೋವಾ ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ.

ಮೇ 6 ರಂದು ಲೈಂಗಿಕ ದೌರ್ಜನ್ಯ ಪ್ರಕರಣ ಸಂಭವಿಸಿತ್ತು.

ಗೋವಾದ ಪೆರ್ನೆಮ್‌ ಠಾಣೆ ಪೊಲೀಸರು ಆರೋಪಿ ರವಿ ಲಮಾಣಿ (28)ಯನ್ನು ಮೇ 10 ರಂದು ಗದಗದಲ್ಲಿ ಬಂಧಿಸಿದ್ದಾರೆ.

ಸಂತ್ರಸ್ತೆಯ ತಾಯಿ ಮೇ 9 ರಂದು ದೂರು ದಾಖಲಿಸಿದ್ದರು ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದರು.

ಈ ಬಗ್ಗೆ ಮಾತನಾಡಿರುವ ಪೆರ್ನೆಮ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿಕ್ರಮ್ ನಾಯಕ್, ‘ರೆಸಾರ್ಟ್‌ನಲ್ಲಿ ರೂಮ್ ಅಟೆಂಡರ್‌ ಆಗಿದ್ದ ಆರೋಪಿಯು ಈಜು ಕೊಳ ಮತ್ತು ಕೊಠಡಿಯೊಳಗೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಎಂದು ಸಂತ್ರಸ್ತೆಯ ತಾಯಿ ದೂರು ನೀಡಿದ್ದರು’ ಎಂದು ಹೇಳಿದ್ದಾರೆ.

ಸಂತ್ರಸ್ತೆ ತಾಯಿ ಕೆಲ ಅಗತ್ಯ ವಸ್ತುಗಳನ್ನು ಕೊಂಡು ತರಲೆಂದು ಅರಂಬೋಲ್‌ನ ಮಾರುಕಟ್ಟೆಗೆ ಹೋಗಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಘಟನೆಯ ನಂತರ ಆರೋಪಿ ಪರಾರಿಯಾಗಿದ್ದ ಎಂದು ನಾಯಕ್ ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ